ಬಿಜೆಪಿಯ ಜಾತಿವಾದಿ ವರ್ತನೆಯಿಂದ ಅಸಮಾನತೆ ಹೆಚ್ಚಾಗಿದೆ: ಮಾಯಾವತಿ

ಬಿಜೆಪಿಯ ಜಾತಿವಾದಿ ಮತ್ತು ಕೋಮುವಾದಿ ವರ್ತನೆಯಿಂದ ದೇಶದಲ್ಲಿ ಅಸಮಾನತೆ ಹೆಚ್ಚಾಗಿದೆ ಎಂದು ಬಹುಜನ ಸಮಾಜ ಪಕ್ಷ(ಬಿಎಸ್ ಪಿ)ದ ಮುಖ್ಯಸ್ಥೆ .....
ಮಾಯಾವತಿ
ಮಾಯಾವತಿ
Updated on: 
ಲಖನೌ: ಬಿಜೆಪಿಯ ಜಾತಿವಾದಿ ಮತ್ತು ಕೋಮುವಾದಿ ವರ್ತನೆಯಿಂದ ದೇಶದಲ್ಲಿ ಅಸಮಾನತೆ ಹೆಚ್ಚಾಗಿದೆ ಎಂದು ಬಹುಜನ ಸಮಾಜ ಪಕ್ಷ(ಬಿಎಸ್ ಪಿ)ದ ಮುಖ್ಯಸ್ಥೆ ಮಾಯಾವತಿ ಅವರು ಮಂಗಳವಾರ ಹೇಳಿದ್ದಾರೆ.
ಸಂತ ರವಿದಾಸ್ ಜಯಂತಿ ಪ್ರಯುಕ್ತ ಹೇಳಿಕೆ ಬಿಡುಗಡೆ ಮಾಡಿರುವ ಮಾಯಾವತಿ, ಬಿಜೆಪಿಯ ಜಾತಿವಾದಿ ವರ್ತನೆ ಮತ್ತು ಕೋಮು ದ್ವೇಷದಿಂದಾಗಿ ದೇಶದಲ್ಲಿ ಅಸಮಾನತೆ ಹೆಚ್ಚಾಗಿದ್ದು, ಸಮಾಜ ಸಹ ವಿಭಜನೆಯಾಗುತ್ತಿದೆ. ಇದರಿಂದ ಜನಸಾಮಾನ್ಯರ ಜೀವನ ಕಷ್ಟಕರವಾಗುತ್ತಿರುವುದು ದುರದೃಷ್ಟಕರ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಸುದೀರ್ಘ ಹೇಳಿಕೆಗಳನ್ನು ನೀಡುವ ಮೂಲಕ ಮತ್ತು ಭಾವನಾತ್ಮಕವಾಗಿ ಬ್ಲ್ಯಾಕ್ ಮೇಲ್ ಮಾಡುವ ಮೂಲಕ ಎಲ್ಲಾ ವಿಚಾರದಲ್ಲೂ ರಾಜಕೀಯ ಮಾಡುತ್ತಿದೆ. ಪುಲ್ವಾಮ ಉಗ್ರ ದಾಳಿಯ ವಿಚಾರದಲ್ಲೂ ಅದನ್ನೇ ಮಾಡುತ್ತಿದೆ ಎಂದು ಮಾಯಾವತಿ ಆರೋಪಿಸಿದ್ದಾರೆ.
ಈ ರೀತಿಯ ರಾಜಕಾರಣದಿಂದ ದೇಶಕ್ಕೆ ಯಾವುದೇ ಲಾಭವಾಗುವುದಿಲ್ಲ ಎಂಬುದುನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು ಮತ್ತು ತನ್ನ ವರ್ತನೆಯನ್ನು ಬದಲಿಸಿಕೊಳ್ಳಬೇಕು ಎಂದು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com