ಲೋಕಸಭಾ ಚುನಾವಣೆ: ಮಾರ್ಚ್ 7-10 ನಡುವೆ ಆಯೋಗ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ
ದೇಶದಲ್ಲಿ ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜಕೀಯ ಪಕ್ಷಗಳು ವೇಳಾಪಟ್ಟಿಗಾಗಿ ಕಾಯುತ್ತಿವೆ. ಮಾರ್ಚ್ 7-10 ರ ನಡುವೆ ಮುಂದಿನ ಲೋಕಸಭಾ ಚುನಾವಣೆಯನ್ನು ಆಯೋಗ ಪ್ರಕಟಿಸುವ ಸಾಧ್ಯತೆ ಇದೆ.
ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜಕೀಯ ಪಕ್ಷಗಳು ವೇಳಾಪಟ್ಟಿಗಾಗಿ ಕಾಯುತ್ತಿವೆ. ಮಾರ್ಚ್ 7-10 ರ ನಡುವೆ ಮುಂದಿನ ಲೋಕಸಭಾ ಚುನಾವಣೆಯನ್ನು ಆಯೋಗ ಪ್ರಕಟಿಸುವ ಸಾಧ್ಯತೆ ಇದೆ.
ಮಾರ್ಚ್ 6 ರಂದು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಪ್ರಧಾನಿ ನೇತೃತ್ವದಲ್ಲಿ ಪರಾಮರ್ಶನಾ ಸಭೆ ನಡೆಯಲಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಅಂದೇ ಎನ್ ಡಿಎ ಸರ್ಕಾರದ ಕೊನೆಯ ಸಂಪುಟ ಸಭೆ ನಡೆಯಲಿದ್ದು, ಪ್ರಗತಿ ಪರಿಶೀಲನಾ ಸಭೆಯ ಹೊರತಾಗಿಯೂ ಸರ್ಕಾರದ ಪ್ರಗತಿಪರ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಯಲಿದೆ ಎಂದು ತಿಳಿದುಬಂದಿದೆ.