ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಮತ್ತೆ ಕಳೆದ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೋವಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮನೋಹರ್ ಪರ್ರಿಕರ್ ಎಂಡೋಸ್ಕೋಪಿಗೆ ಒಳಗಾಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ.