ಕುಂಭಮೇಳದಲ್ಲಿ ಐತಿಹಾಸಿಕ ಘಟನೆ: ಸಫಾಯಿ ಕರ್ಮಚಾರಿಗಳ ಪಾದ ತೊಳೆದು ಸನ್ಮಾನಿಸಿದ ಪ್ರಧಾನಿ ಮೋದಿ!

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಕುಂಭ, ಸ್ವಚ್ಛ ಆಭಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಕುಂಭಮೇಳದಲ್ಲಿ ಐತಿಹಾಸಿಕ ಘಟನೆ: ಸಫಾಯಿ ಕರ್ಮಚಾರಿಗಳ ಪಾದ ತೊಳೆದು ಸನ್ಮಾನಿಸಿದ ಪ್ರಧಾನಿ ಮೋದಿ!
ಕುಂಭಮೇಳದಲ್ಲಿ ಐತಿಹಾಸಿಕ ಘಟನೆ: ಸಫಾಯಿ ಕರ್ಮಚಾರಿಗಳ ಪಾದ ತೊಳೆದು ಸನ್ಮಾನಿಸಿದ ಪ್ರಧಾನಿ ಮೋದಿ!
Updated on
ಪ್ರಯಾಗ್ ರಾಜ್: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಕುಂಭ, ಸ್ವಚ್ಛ ಆಭಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. 
ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯಿಂದ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ವೇದಿಕೆಗೆ ಬರುವುದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಕುಂಭಮೇಳದಲ್ಲಿ ಸ್ವಚ್ಛತೆ ಕಾಪಾಡಲು ಶ್ರಮಿಸಿದ ಸಫಾಯಿ ಕರ್ಮಚಾರಿಗಳ ಪಾದ ತೊಳೆದು ಸನ್ಮಾನ ಮಾಡಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಸಫಾಯಿ ಕರ್ಮಚಾರಿ, ಸ್ವಚ್ಛಾಗ್ರಹಿಗಳು ಪೊಲೀಸ್ ಸಿಬ್ಬಂದಿಗಳು, ನಾವಿಕರಿಗೆ ಸ್ವಚ್ಛ ಕುಂಭ ಸ್ವಚ್ಛ ಆಭಾರ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com