ವಾದ್ರಾ ಪತ್ನಿ ಪ್ರಿಯಾಂಕಾ ಗಾಂಧಿ ಇತ್ತೀಚೆಗೆ ಉತ್ತರ ಪ್ರದೇಶದ ಪೂರ್ವ ವಿಭಾಗಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ಇನ್ನು ಇಡಿ ಪ್ರಕರಣದಲ್ಲಿ ವಾದ್ರಾ ವಿಚಾರಣೆ ನಡೆಯುವ ಮುನ್ನ ಅವರು ಸಹ ದೆಹಲಿ, ಜೈಪುರದ ಅನೇಕ ಸಭೆಗಳಲ್ಲಿ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಗಳಾಗಿದ್ದಾರೆ. ಈಗ ತಾವು ದೊಡ್ಡ ಮಟ್ಟದ ಸಾರ್ವಜನಿಕ ಸೇವೆ ನಡೆಸುವುದಾಗಿ ಹೇಳಿಕೊಳ್ಳುವ ಮೂಲಕ ತಾವೂ ರಾಜಕೀಯಕ್ಕೆ ಧುಮುಕುವ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.