ತೆರಿಗೆದಾರರ ಹಣ ಲೂಟಿ ಮಾಡುವುದು ತಡೆದಿದ್ದು ವಿರೋಧ ಪಕ್ಷದವರಿಗೆ ಕಷ್ಟವಾಗಿದೆ: ಪ್ರಧಾನಿ ಮೋದಿ

ಹಿಂದಿನ ಸರ್ಕಾರದಲ್ಲಿ ಸರ್ಕಾರದ ಸೌಲಭ್ಯಗಳನ್ನು ಮತ್ತು ನೆರವನ್ನು ಸುಮಾರು 8 ಕೋಟಿ ನಕಲಿ ಫಲಾನುಭವಿಗಳು ಪಡೆಯುತ್ತಿದ್ದರು. ಆದರೆ ...
ಪ್ರಧಾನ ಮಂತ್ರಿ ನರೇಂದ್ರ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ
ನವದೆಹಲಿ: ಹಿಂದಿನ ಸರ್ಕಾರದಲ್ಲಿ ಸರ್ಕಾರದ ಸೌಲಭ್ಯಗಳನ್ನು ಮತ್ತು ನೆರವನ್ನು ಸುಮಾರು 8 ಕೋಟಿ ನಕಲಿ ಫಲಾನುಭವಿಗಳು ಪಡೆಯುತ್ತಿದ್ದರು. ಆದರೆ ತಮ್ಮ ಸರ್ಕಾರ ಬಂದ ಮೇಲೆ ದೇಶದ ತೆರಿಗೆ ಪಾವತಿದಾರರ ಹಣವನ್ನು ಲೂಟಿ ಮಾಡುವುದನ್ನು ತಡೆದ ಕಾರಣ ವಿರೋಧ ಪಕ್ಷದ ನಾಯಕರು ನಮ್ಮನ್ನು ನಿಂದಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎನ್ ಡಿಎ ಸರ್ಕಾರದ ಜನ ಧನ ಯೋಜನೆ, ಆಧಾರ್ ಕಾರ್ಡು ಯೋಜನೆಗಳ ಪರಿಣಾಮಕಾರಿ ಜಾರಿಯಿಂದ ನಕಲಿ ಫಲಾನುಭವಿಗಳಿಂದ 1,10,000 ಕೋಟಿ ರೂಪಾಯಿ ಸಾರ್ವಜನಿಕ ಹಣವನ್ನು ಉಳಿತಾಯ ಮಾಡಲಾಗಿದೆ ಎಂದು ಹೇಳಿದರು.
ಖಾಸಗಿ ಸುದ್ದಿ ವಾಹಿನಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಹಣವನ್ನು ಲೂಟಿ ಮಾಡುತ್ತಿದ್ದವರನ್ನು ಎಲ್ಲಾ ರೀತಿಯಲ್ಲಿ ತಡೆದಿದ್ದರಿಂದ ಯಾರು ಕೂಡ ಸರ್ಕಾರವನ್ನು ಹಗರಣದಲ್ಲಿ ಸಿಲುಕಿಸಲು ಸಾಧ್ಯವಿಲ್ಲ. ಹಿಂದೆ ಸರ್ಕಾರದಿಂದ 8 ಕೋಟಿ ನಕಲಿ ಫಲಾನುಭವಿಗಳು ಸರ್ಕಾರದ ಸೌಲಭ್ಯವನ್ನು ಪಡೆಯುತ್ತಿದ್ದರು. ನಮ್ಮ ಸರ್ಕಾರ ಅದನ್ನು ನಿಲ್ಲಿಸಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com