ಮುಂಜಾಗ್ರತೆಯೋ ಅಥವಾ 3.0ಗೆ ಸಿದ್ಧತೆಯೋ; ಸೇನೆಯ 3 ದಳಗಳ ಮುಖ್ಯಸ್ಥರೊಂದಿಗೆ ಪ್ರಧಾನಿ ಚರ್ಚೆ

ಪಾಕ್ ಅಕ್ರಮಿತ ಕಾಶ್ಮೀರದಲ್ಲಿ ಬೀಡು ಬಿಟ್ಟಿದ್ದ ಉಗ್ರರ ಅಡಗುದಾಣಗಳ ಮೇಲೆ ಭಾರತೀಯ ವಾಯುಸೇನೆ ದಾಳಿ ಮಾಡಿದ ಬೆನ್ನಲ್ಲೇ ಇತ್ತ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೇನೆಯ ಮೂರೂ ದಳಗಳ ಮುಖ್ಯಸ್ಥರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಪಾಕ್ ಅಕ್ರಮಿತ ಕಾಶ್ಮೀರದಲ್ಲಿ ಬೀಡು ಬಿಟ್ಟಿದ್ದ ಉಗ್ರರ ಅಡಗುದಾಣಗಳ ಮೇಲೆ ಭಾರತೀಯ ವಾಯುಸೇನೆ ದಾಳಿ ಮಾಡಿದ ಬೆನ್ನಲ್ಲೇ ಇತ್ತ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೇನೆಯ ಮೂರೂ ದಳಗಳ ಮುಖ್ಯಸ್ಥರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದಾರೆ.
ವಾಯುದಾಳಿ ಬಳಿಕ ಪಾಕಿಸ್ತಾನದಿಂದ ಎದುರಾಗಬಹುದಾದ ಸಂಭಾವ್ಯ ದಾಳಿಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಸೇನೆಯ ಮುಖ್ಯಸ್ಥ ಬಿಪಿನ್ ರಾವತ್, ವಾಯು ಸೇನೆ ಮುಖ್ಯಸ್ಥ ಬಿಎಸ್ ಧನೋವಾ ಮತ್ತು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಅವರೊಂದಿಗೆ ಪ್ರಧಾನಿ ಮೋದಿ ಮಹತ್ವದ ಚರ್ಚೆ ನಡೆಸಿದ್ದಾರೆ. 
ಅಂತೆಯೇ ಮುಂಜಾಗ್ರತಾ ಕ್ರಮಗಳ ಕುರಿತು ಪ್ರಧಾನಿ ಮೋದಿ ಚರ್ಚೆ ನಡೆಸಿದ್ದು, ನೌಕಾಗಡಿ, ವಾಯುಗಡಿ ಮತ್ತು ಭೂಗಡಿಗಳಲ್ಲಿ ಕಟ್ಟೆಚ್ಚರವಾಗಿರುವಂತೆ ಮೂರುದಳಗ ಮುಖ್ಯಸ್ಥರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಯಾವುದೇ ರೀತಿಯ ಪರಿಸ್ಥಿತಿಗೂ ಸರ್ವಸನ್ನದ್ಧರಾಗಿರುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com