ಫೆ.27 ರಂದು ಬೆಳಿಗ್ಗೆ ಜಮ್ಮು-ಕಾಶ್ಮೀರದ ರಜೌರಿ ಹಾಗೂ ನೌಶೇರಾಗಳಲ್ಲಿ ವಾಯುಗಡಿಯನ್ನು ಉಲ್ಲಂಘನೆ ಮಾಡಿದ್ದು ಬಾಂಬ್ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಪಾಕಿಸ್ತಾನದ ಉಗ್ರರು ಭಾರತದ ವಿಮಾನಗಳನ್ನು ಹೈಜಾಕ್ ಮಾಡುವ ಸಾಧ್ಯತೆ ಇರುವುದರಿಂದ ಜಮ್ಮು-ಕಾಶ್ಮೀರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.