ಲೋಕಸಭೆ ಚುನಾವಣೆ: ಪಂಜಾಬ್ ನಲ್ಲಿ ಅಕಾಲಿ ದಳ 10, ಬಿಜೆಪಿ 3 ಸ್ಥಾನಗಳಲ್ಲಿ ಸ್ಪರ್ಧೆ

ಬಿಜೆಪಿ ಮತ್ತು ಅದರ ಹಳೆ ಮಿತ್ರ ಪಕ್ಷ ಶಿರೋಮಣಿ ಅಕಾಲಿ ದಳ ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಲಿವೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ...
ಸುಖಬೀರ್ ಸಿಂಗ್ ಬಾದಲ್ ಜತೆ ಅಮಿತ್ ಶಾ ಸಭೆ
ಸುಖಬೀರ್ ಸಿಂಗ್ ಬಾದಲ್ ಜತೆ ಅಮಿತ್ ಶಾ ಸಭೆ
ನವದೆಹಲಿ: ಬಿಜೆಪಿ ಮತ್ತು ಅದರ ಹಳೆ ಮಿತ್ರ ಪಕ್ಷ ಶಿರೋಮಣಿ ಅಕಾಲಿ ದಳ ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಲಿವೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಗುರುವಾರ ಹೇಳಿದ್ದಾರೆ.
ಇಂದು ಸೀಟು ಹಂಚಿಕೆ ಕುರಿತು ಅಕಾಲಿ ದಳದ ಜತೆ ಮಾತುಕತೆ ನಡೆಸಿದ ಅಮಿತ್ ಶಾ,  ಕಳೆದ ಲೋಕಸಭೆ ಚುನಾವಣೆಯಂತೆ ಈ ಬಾರಿಯೂ ಅಕಾಲಿ ದಳ 10 ಸ್ಥಾನಗಳಲ್ಲಿ ಹಾಗೂ ಬಿಜೆಪಿ 3 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಅವರೊಂದಿಗೆ ಸಭೆ ನಡೆಸಿದ ಬಳಿಕ ಅಮಿತ್ ಶಾ ಅವರು ಈ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com