ಉಗ್ರರ ಮೇಲೆ ವೈಮಾನಿಕ ದಾಳಿಯಿಂದ ಹೆಚ್ಚು ಸ್ಥಾನ: ಯಡಿಯೂರಪ್ಪ ಹೇಳಿಕೆಗೆ ಕೇಂದ್ರ ಸಚಿವ ವಿಕೆ ಸಿಂಗ್ ಖಂಡನೆ
ದೇಶ
ಉಗ್ರರ ಮೇಲೆ ವೈಮಾನಿಕ ದಾಳಿಯಿಂದ ಹೆಚ್ಚು ಸ್ಥಾನ: ಯಡಿಯೂರಪ್ಪ ಹೇಳಿಕೆಗೆ ಕೇಂದ್ರ ಸಚಿವ ವಿಕೆ ಸಿಂಗ್ ಖಂಡನೆ
ಪಾಕಿಸ್ತಾನದ ಉಗ್ರರ ಮೇಲೆ ವೈಮಾನಿಕ ದಾಳಿಯ ಕುರಿತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಹೇಳಿಕೆಯನ್ನು ನಿವೃತ್ತ ಸೇನಾನಿ, ಕೇಂದ್ರ ಸಚಿವ ವಿಕೆ ಸಿಂಗ್ ಖಂಡಿಸಿದ್ದಾರೆ.
ಪಾಕಿಸ್ತಾನದ ಉಗ್ರರ ಮೇಲೆ ವೈಮಾನಿಕ ದಾಳಿಯ ಕುರಿತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಹೇಳಿಕೆಯನ್ನು ನಿವೃತ್ತ ಸೇನಾನಿ, ಕೇಂದ್ರ ಸಚಿವ ವಿಕೆ ಸಿಂಗ್ ಖಂಡಿಸಿದ್ದಾರೆ.
ಯಡಿಯೂರಪ್ಪ ಹೇಳಿಕೆ ಬಗ್ಗೆ ಟ್ವೀಟ್ ಮಾಡಿರುವ ವಿಕೆ ಸಿಂಗ್, ಯಡಿಯೂರಪ್ಪನವರೇ, ಇಡೀ ದೇಶ ಒಗ್ಗಟ್ಟಿನಿಂದ ನಿಂತಿದೆ. ನಮ್ಮ ಸರ್ಕಾರ ಕೈಗೊಂಡಿರುವ ಕ್ರಮ ದೇಶದ ಹಿತಾಸಕ್ತಿ ಹಾಗೂ ದೇಶದ ಜನತೆಯ ರಕ್ಷಣೆಯ ದೃಷ್ಟಿಯಿಂದಲೇ ಹೊರತು ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದಕ್ಕಾಗಿ ಅಲ್ಲ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಪಾಕ್ ಉಗ್ರರ ಮೇಲೆ ವೈಮಾನಿಕ ದಾಳಿ ನಡೆದಿದ್ದು ಈ ಬಾರಿ ರಾಜ್ಯ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 22 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂಬ ಯಡಿಯೂರಪ್ಪ ಹೇಳಿಕೆಗೆ ವ್ಯಾಪಕ ಟೀಕೆ, ಖಂಡನೆ ವ್ಯಕ್ತವಾಗಿ ಯಡಿಯೂರಪ್ಪ ವಾಯುಪಡೆ ಕಾರ್ಯಾಚರಣೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಯಡಿಯೂರಪ್ಪ ಸೇನಾ ಕಾರ್ಯಾಚರಣೆಯನ್ನು ರಾಜಕೀಯಗೊಳಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ