ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆ ಗುರಿಯಾಗಿರಿಸಿ ಅಪ್ರಚೋದಿತ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ಮಂಗಳವಾರ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ರಜೌರಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ಮಂಗಳವಾರ ತಿಳಿದುಬಂದಿದೆ. 
ಭಾರತೀಯ ಸೇನಾ ಕೇಂದ್ರಗಳನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಗೆ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ. 
ಗುಂಡಿನ ಚಕಮಕಿಯಲ್ಲಿ ಈ ವರೆಗೂ ಯಾವುದೇ ರೀತಿಯ ಸಾವು ನೋವುಗಳು ಸಂಭವಿಸಿಲ್ಲ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. 
ನಿನ್ನೆ ಕೂಡ ಪಾಕಿಸ್ತಾನ ಪೂಂಚ್ ಜಿಲ್ಲೆಯ ಕರ್ಮಾರಾ ಪ್ರದೇಶದಲ್ಲಿ ಕದನ ವಿರಾಮ ಉಲ್ಲಂಗನೆ ಉಲ್ಲಂಘನೆ ಮಾಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com