ಮೊದಲು ನನ್ನ ಜಾತಿ ಅಭಿವೃದ್ಧಿ, ನಂತರ ಸಮಾಜ: ಕಾಂಗ್ರೆಸ್ ಸಚಿವೆ ಹೇಳಿಕೆ!

Published On :
ಅಲ್ವಾರ್(ರಾಜಸ್ತಾನ): ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದ್ದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂಪುಟ ಸಚಿವೆ ಮಮತಾ ಭೂಪೇಶ್ ಅವರು ಇದೀಗ ವಿವಾದಿತ ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ದಾರೆ.
ಅಲ್ವಾರ್ ಜಿಲ್ಲೆಯ ರೇನಿ ಪ್ರದೇಶದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಸ್ಥಾನ ಸಚಿವ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆಯಾಗಿರುವ ಮಮತಾ ಭೂಪೇಶ್ ಅವರು ಈ ಹೇಳಿಕೆ ನೀಡಿದ್ದಾರೆ.
ನನ್ನ ಮೊದಲ ಕರ್ತವ್ಯ ನನ್ನ ಜಾತಿಯನ್ನ ಅಭಿವೃದ್ಧಿ ಪಡಿಸುವುದು, ತದನಂತರ ಸಮಾಜದ ಅಭಿವೃದ್ಧಿ ಮಾಡುವುದಾಗಿ ತಿಳಿಸಿದ್ದಾರೆ. ಈ ಹೇಳಿಕೆ ವಿರುದ್ಧ ವಿರೋಧ ಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
200 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ 99 ಸ್ಥಾನಗಳಲ್ಲಿ ಗೆಲುವು ದಾಖಲು ಮಾಡಿ ಸರ್ಕಾರ ರಚನೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


