ಉತ್ತರ ಪ್ರದೇಶ: ಜಾನುವಾರು ಸಾಗಿಸುತ್ತಿದ್ದ ಟ್ರಕ್ ಗುಡಿಸಲಿಗೆ ನುಗ್ಗಿ ಏಳು ಮಂದಿ ದುರ್ಮರಣ

ಉತ್ತರ ಪ್ರದೇಶದ ಚಾಂದೌಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದು ಗುಡಿಸಲಿಗೆ ನುಗ್ಗಿದ ಪರಿಣಾಮ ಇಬ್ಬರು ಮಹಿಳೆಯರು, ನಾಲ್ವರು ಮಕ್ಕಳು ಸೇರಿದಂತೆ ಸ್ಥಳದಲ್ಲಿಯೇ ಏಳು ಮಂದಿ ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಲಖನೌ:  ಉತ್ತರ ಪ್ರದೇಶದ ಚಾಂದೌಲಿ ಜಿಲ್ಲೆಯ  ಹಳ್ಳಿಯೊಂದರಲ್ಲಿ  ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದು ಗುಡಿಸಲಿಗೆ ನುಗ್ಗಿದ ಪರಿಣಾಮ  ಇಬ್ಬರು ಮಹಿಳೆಯರು, ನಾಲ್ವರು ಮಕ್ಕಳು ಸೇರಿದಂತೆ ಸ್ಥಳದಲ್ಲಿಯೇ ಏಳು ಮಂದಿ ಮೃತಪಟ್ಟಿರುವ ಘಟನೆ  ಇಂದು ಮುಂಜಾನೆ ನಡೆದಿದೆ.

ಈ ಮಧ್ಯೆ ನಿರ್ಲಕ್ಷ್ಯದ ಕಾರಣ ಸ್ಥಳೀಯ ಪೊಲೀಸ್ ಠಾಣೆಯ  ಮೂವರು ಪೊಲೀಸರು ಹಾಗೂ ಒಬ್ಬ ಇನ್ಸ್ ಪೆಕ್ಟರ್ ನನ್ನು  ಸೇವೆಯಿಂದ ಅಮಾನತುಗೊಳಿಸಿದೆ.

ಇಂದು ಮುಂಜಾನೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದನ್ನು ಪೊಲೀಸ್ ವ್ಯಾನ್ ಬೆನ್ನತ್ತಿದೆ. ಈ ಸಂದರ್ಭದಲ್ಲಿ  ವೇಗದ ಮೇಲೆ ನಿಯಂತ್ರಣ ಸಾಧಿಸಲಾಗಿದೆ ಎಂದು ಟ್ರಕ್ ಚಾಲಕ ವಿದ್ಯುತ್ ಕಂಬವೊಂದಕ್ಕೆ ಢಿಕ್ಕಿ ಹೊಡಿಸಿದ್ದಾನೆ. ಬಳಿಕ ಕಾಳು ರಾಮ್ ಎಂಬವರ ಗುಡಿಸಲಿಗೆ ನುಗ್ಗಿಸಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಮನೆಯಿಂದ ಹೊರಗಡೆ ಇದ್ದ ಕಾಳು ರಾಮ್ , ಆತನ ಮಗ ಹಾಗೂ ಸೊಸೆ ಮಾತ್ರ ಉಳಿದುಕೊಂಡಿದ್ದು, ಉಳಿದ ಏಳು ಮಂದಿ ಮೃತಪಟ್ಟಿದ್ದಾರೆ.

ಆದಾಗ್ಯೂ, ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಬರುವವರೆಗೂ  ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ನೀಡುವುದಿಲ್ಲ ಎಂದು  ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.

ಘಟನೆ ಬಗ್ಗೆ ತಿಳಿದು ಸ್ಥಳಕ್ಕೆ ಧಾವಿಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್  ಎನ್ ಎಸ್ ಚಾಹಲ್,  ಎಸ್ಪಿ ಸಂತೋಷ್ ಕುಮಾರ್ ಸಿಂಗ್ ಹಾಗೂ ಎಎಸ್ ಪಿ ವಿರೇಂದ್ರ ಯಾದವ್, ನಿರ್ಲಕ್ಷ್ಯ ಆರೋಪದ ಮೇರೆಗೆ  ಮೂವರು ಪೊಲೀಸರು ಹಾಗೂ ಒಬ್ಬ ಇನ್ಸ್ ಪೆಕ್ಟರ್ ನನ್ನು  ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ಮೃತರ ಕುಟುಂಬ ಸದಸ್ಯರಿಗೆ ಜಿಲ್ಲಾಡಳಿತದಿಂದ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಲಾಯಿತು. ನಂತರ ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ಗ್ರಾಮಸ್ಥರು ಅವಕಾಶ ಮಾಡಿಕೊಟ್ಟರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com