ದೇಶ

ತ್ರಿವಳಿ ತಲಾಕ್ ಮಸೂದೆ ಅಂಗೀಕಾರಕ್ಕೆ ರಾಜ್ಯಸಭೆಯಲ್ಲಿ ಕಾಂಗ್ರೆಸ್, ವಿಪಕ್ಷಗಳ ಅಡ್ಡಗಾಲು!

ತ್ರಿವಳಿ ತಲಾಕ್ ಮಸೂದೆ ಅಂಗೀಕಾರಕ್ಕೆ ರಾಜ್ಯಸಭೆಯಲ್ಲಿ ಕಾಂಗ್ರೆಸ್, ವಿಪಕ್ಷಗಳ ಅಡ್ಡಗಾಲು!
ತ್ರಿವಳಿ ತಲಾಕ್ ಮಸೂದೆ ಅಂಗೀಕಾರಕ್ಕೆ ರಾಜ್ಯಸಭೆಯಲ್ಲಿ ಕಾಂಗ್ರೆಸ್, ವಿಪಕ್ಷಗಳ ಅಡ್ಡಗಾಲು!
Published On :
ತ್ರಿವಳಿ ತಲಾಕ್ ಮಸೂದೆ ಅಂಗೀಕಾರಕ್ಕೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಅಡ್ಡಗಾಲು ಹಾಕಿದ್ದು, ಯಾವುದೇ ಚರ್ಚೆಯಿಲ್ಲದೇ ಕಲಾಪ ವ್ಯರ್ಥವಾಗಿದೆ. 
ಲೋಕಸಭೆಯಲ್ಲಿ ಮಂಡನೆಯಾಗಿದ್ದನ್ನು ಯಥಾವತ್ ಆಗಿ ಅಂಗೀಕರಿಸಲು ರಾಜ್ಯಸಭೆಯೇನು ರಬ್ಬರ್ ಸ್ಟ್ಯಾಂಪ್ ಅಲ್ಲ ಎಂದು ವಿಪಕ್ಷಗಳು ಹೇಳಿದ್ದು, ತ್ರಿವಳಿ ತಲಾಕ್ ಮಸೂದೆಯನ್ನು ಮತ್ತೊಮ್ಮೆ ಪರಿಶೀಲಿಸಲು ಆಯ್ಕೆ ಸಮಿತಿಗೆ ಕಳಿಸಬೇಕೆಂದು ಆಗ್ರಹಿಸಿವೆ. ವಿಪಕ್ಷಗಳ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸರ್ಕಾರ ವಿವಾಹಿತ ಮುಸ್ಲಿಮ್ ಮಹಿಳೆಯರ ಹಕ್ಕುಗಳಿಗೆ ಮಹತ್ವವಾಗಿರುವ ವಿಷಯದಲ್ಲಿ ಚರ್ಚೆ ನಡೆಸುವುದರಿಂದ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಪಲಾಯನ ಮಾಡುತ್ತಿವೆ ಎಂದು ಆರೋಪಿಸಿದೆ. 
ರಾಜ್ಯಸಭೆಯಲ್ಲಿ ಸಚಿವ ರವಿಶಂಕರ್ ಪ್ರಸಾದ್ ಮಸೂದೆ ಮಂಡಿಸುತ್ತಿದ್ದಂತೆಯೇ ಸರ್ಕಾರ-ವಿಪಕ್ಷಗಳ ಸದಸ್ಯರ ನಡುವೆ ವಾಗ್ವಾದ ನಡೆದಿದ್ದು, ಯಾವುದೇ ಮಹತ್ವದ ಚರ್ಚೆ ನಡೆಯದೇ ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.