ಮನೋಹರ್ ಪರಿಕ್ಕರ್ ಅವರ ಬೆಡ್ ರೂಮ್ ನಲ್ಲಿ ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದ ಕಡತಗಳಿವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ತಮ್ಮ ಆರೋಪವನ್ನು ಸಮರ್ಥಿಸಿಕೊಳ್ಳಲು ಗೋವಾ ಸಚಿವರ ಹೇಳಿಕೆಯನ್ನು ಉಲ್ಲೇಖಿಸಿರುವ ರಾಹುಲ್ ಗಾಂಧಿ, "ನನ್ನ ಬಳಿ ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದ ಎಲ್ಲಾ ಕಡತಗಳಿವೆ, ಆದ್ದರಿಂದ ನನ್ನನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ" ಎಂದು ಪರಿಕ್ಕರ್ ಸಚಿವ ಸಂಪುಟ ಸಭೆಯಲ್ಲಿ ಹೇಳಿದ್ದನ್ನು ಗೋವಾ ಸಚಿವರು ಹೇಳಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.