ನವೀನ್ ಪಟ್ನಾಯಕ್
ದೇಶ
ಮಹಿಳಾ ಸ್ವಸಹಾಯ ಸಂಘಗಳಿಗೆ ಬಡ್ಡಿರಹಿತ ಸಾಲ ಘೋಷಿಸಿದ ಒಡಿಶಾ ಸಿಎಂ
ಮಹಿಳಾ ಸ್ವ ಸಹಾಯ ಸಂಘಗಳಿಗೆ ಮೂರು ಲಕ್ಷ ರುಪಾಯಿವರೆಗೆ ಬಡ್ಡಿ ರಹಿತ ಸಾಲ ನೀಡುವುದಾಗಿ ಒಡಿಶಾ ಮುಖ್ಯಮಂತ್ರಿ...
ಪೂರಿ: ಮಹಿಳಾ ಸ್ವ ಸಹಾಯ ಸಂಘಗಳಿಗೆ ಮೂರು ಲಕ್ಷ ರುಪಾಯಿವರೆಗೆ ಬಡ್ಡಿ ರಹಿತ ಸಾಲ ನೀಡುವುದಾಗಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಶನಿವಾರ ಘೋಷಿಸಿದ್ದಾರೆ.
ಇಂದು ಪೂರಿಯಲ್ಲಿ ಮಿಷನ್ ಶಕ್ತಿ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ನವೀನ್ ಪಟ್ನಾಯಕ್, ನೀವು ಇನ್ನು ಮುಂದೆ ಶೂನ್ಯ ಬಡ್ಡಿದರದಲ್ಲಿ ಸಾಲ ಪಡೆಯುತ್ತೀರಿ. ರಾಜ್ಯ ಸರ್ಕಾರ ಮಹಿಳಾ ಸ್ವ ಸಹಾಯ ಸಂಘಗಳಿಗೆ ಮೂರು ಲಕ್ಷ ರುಪಾಯಿವರೆಗೆ ಬಡ್ಡಿರಹಿತ ಸಾಲ ನೀಡಲಿದೆ. ಸುಮಾರು 70 ಲಕ್ಷ ಮಹಿಳೆಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದರು.
ಇದೇ ವೇಳೆ ಒಡಿಶಾ ಸಿಎಂ, ಸುಮಾರು ಆರು ಲಕ್ಷ ಮಹಿಳಾ ಸ್ವಸಹಾಯ ಸಂಘಗಳಿಗೆ ತಲಾ 3 ಸಾವಿರ ರುಪಾಯಿ ಆರ್ಥಿಕ ನೆರವು ನೀಡಿದರು.
ಮಿಷನ್ ಶಕ್ತಿ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 50 ಸಾವಿರ ಮಹಿಳೆಯರು ಭಾಗವಹಿಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ