ಒಸ್ಮಾನಾಬಾದ್'ನ ಲಾತೂರಿನಲ್ಲಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ಅಮಿತ್ ಶಾ ಅವರು, ಮೈತ್ರಿ ಬಗ್ಗೆ ಪಕ್ಷದ ಕಾರ್ಯಕರ್ತರು ಗೊಂದಲಕ್ಕೀಡಾಗವ ಅಗತ್ಯವಿಲ್ಲ. ಮೈತ್ರಿ ಪಕ್ಷಗಳು ನಮ್ಮೊಂದಿಗೆ ಕೈಜೋಡಿಸುವುದನ್ನು ಮುಂದುವರೆಸಿದರೆ, ಅವರು ಗೆಲ್ಲುವಂತೆ ಮಾಡುತ್ತೇವೆ. ಇಲ್ಲದೇ ಹೋದಲ್ಲಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸೋಲು ಕಾಣುವಂತೆ ಮಾಡುತ್ತೇವೆ. ಪಕ್ಷದ ಕಾರ್ಯಕರ್ತರು ಪ್ರತೀ ಬೂತ್ ನಲ್ಲಿಯೂ ಸಿದ್ಧತೆಗಳನ್ನು ಈಗಲೇ ಮಾಡಿಕೊಳ್ಳಬೇಕೆಂದು ಹೇಳಿದ್ದಾರೆ.