ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಕ್ಕೆ ಶೇ.10 ರಷ್ಟು ಮೀಸಲಾತಿ: ಚುನಾವಣೆಗೆ ಮೋದಿ ಮಾಸ್ಟರ್ ಸ್ಟ್ರೋಕ್!

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಜ.07 ರಂದು ಒಪ್ಪಿಗೆ ನೀಡಿದೆ.
ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಕ್ಕೆ ಶೇ.10 ರಷ್ಟು ಮೀಸಲಾತಿ: ಚುನಾವಣೆಗೆ ಮೋದಿ ಮಾಸ್ಟರ್ ಸ್ಟ್ರೋಕ್!
ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಕ್ಕೆ ಶೇ.10 ರಷ್ಟು ಮೀಸಲಾತಿ: ಚುನಾವಣೆಗೆ ಮೋದಿ ಮಾಸ್ಟರ್ ಸ್ಟ್ರೋಕ್!
Updated on
ನವದೆಹಲಿ: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಜ.07 ರಂದು ಒಪ್ಪಿಗೆ ನೀಡಿದೆ. 
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.  ಈ ನಿರ್ಣಯದಿಂದ ಮೋದಿ ಸರ್ಕಾರ ಮುಂದಿನ ದಿನಗಳಲ್ಲಿ ಮೇಲ್ವರ್ಗದ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ನೀಡಲು ಕಾನೂನಿಗೆ ತಿದ್ದುಪಡಿ ತರಲಿದೆ. 
ಮೋದಿ ಸರ್ಕಾರದ ಈ ನಿರ್ಣಯದಿಂದ ಇನ್ನು ಮುಂದಿನ ದಿನಗಳಲ್ಲಿ ಎಸ್ ಸಿ, ಎಸ್ ಟಿ ಹೊರತಾಗಿ, ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗವರಿಗೂ ಮೀಸಲಾತಿ ಸಿಗಲಿದೆ. 2019 ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೋದಿ ಸರ್ಕಾರ ನಿರ್ಣಯ ಮಹತ್ವ ಪಡೆದುಕೊಂಡಿದ್ದು ಈ ನಡೆಯನ್ನು ಸಾಮಾನ್ಯವರ್ಗದ ಜನತೆಯ ಮತ ಗಳಿಸಲು ರೂಪಿಸಿರುವ ಮಾಸ್ಟ್ರರ್ ಸ್ಟ್ರೋಕ್ ಎಂದೇ ವಿಶ್ಲೇಷಿಸಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com