ಅಭಿಷೇಕ್ ಮನು ಸಿಂಘ್ವಿ
ದೇಶ
ಇದೊಂದು ಚುನಾವಣಾ ಗಿಮಿಕ್: ಮೇಲ್ಜಾತಿಯ ಬಡವರಿಗೆ ಶೇ.10 ಮೀಸಲಾತಿ ಕುರಿತು ಕಾಂಗ್ರೆಸ್ ಟೀಕೆ
ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜನರಿಗೂ ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಚುನಾವಣಾ ಗಿಮಿಕ್ ಅಷ್ಟೇ ಎಂದು ಕಾಂಗ್ರೆಸ್ ಟೀಕಿಸಿದೆ.
ನವದೆಹಲಿ: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜನರಿಗೂ ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಚುನಾವಣಾ ಗಿಮಿಕ್ ಅಷ್ಟೇ ಎಂದು ಕಾಂಗ್ರೆಸ್ ಟೀಕಿಸಿದೆ.
ಕೇಂದ್ರ ಸಚಿವ ಸಂಪುಟ ನಿರ್ಣಯದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಭಿಷೇಕ್ ಮನು ಸಿಂಘ್ವಿ, ಮೇಲ್ವರ್ಗದ ಬಡವರಿಗೆ ಮೀಸಲಾತಿ ನೀಡುವ ಬಗ್ಗೆ ಕೇಂದ್ರ ಸರ್ಕಾರ 4 ವರ್ಷಗಳಿಂದ ಯೋಚನೆ ಮಾಡಿರಲಿಲ್ಲ. ಆದರೆ 2019 ರ ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗುವ ಕೆಲವೇ ತಿಂಗಳುಗಳ ಮುನ್ನ ಈ ಮೀಸಲಾತಿಯನ್ನು ಜಾರಿಗೆ ತಂದಿದೆ. ಇದೊಂದು ಚುನಾವಣಾ ಗಿಮಿಕ್ ಅಷ್ಟೇ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ