ಜನವರಿ 10 ರಂದು ಐವರು ನ್ಯಾಯಾಧೀಶರ ಪೀಠದ ಮುಂದೆ ಅಯೋಧ್ಯೆ ಪ್ರಕರಣದ ವಿಚಾರಣೆ

ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಗಾಗಿ ಸುಪ್ರೀಂಕೋರ್ಟ್ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠವನ್ನು ಸ್ಥಾಪಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಗಾಗಿ ಸುಪ್ರೀಂಕೋರ್ಟ್ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠವನ್ನು  ಸ್ಥಾಪಿಸಿದೆ.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯಿ ನೇತೃತ್ವದಲ್ಲಿನ ಪೀಠದಲ್ಲಿ ನ್ಯಾಯಾಧೀಶರಾದ ಎಸ್ ಎ ಬೊಬ್ಡೆ, ಎನ್ ವಿ ರಾಮಣ್ಣ, ಯುಯು ಲಲಿತ್ ಮತ್ತು ಡಿ. ವೈ. ಚಂದ್ರಚೂಡ್   ಇದ್ದಾರೆ.
ಜನವರಿ 10 ರಂದು ಬೆಳಗ್ಗೆ 10 ಗಂಟೆಗೆ  ಸಾಂವಿಧಾನಿಕ ಪೀಠದಲ್ಲಿ ಈ ಪ್ರಕರಣದ  ವಿಚಾರಣೆ ನಡೆಯಲಿದೆ ಎಂದು ಸುಪ್ರೀಂಕೋರ್ಟ್ ವೆಬ್ ಸೈಟ್  ನೋಟಿಸ್ ನಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com