ಮೇಲ್ವರ್ಗದ ಬಡವರಿಗೆ ಶೇ. 10 ರಷ್ಟು ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಮಂಡನೆ

ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಒದಗಿಸುವ ಮಸೂದೆ ಲೋಕಸಭೆಯಲ್ಲಿಂದು ಮಂಡನೆಯಾಯಿತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ  ಒದಗಿಸುವ ಮಸೂದೆ ಲೋಕಸಭೆಯಲ್ಲಿಂದು ಮಂಡನೆಯಾಯಿತು.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ಥಾವರ್ ಚಂದ್ ಗೆಹ್ಲೋಟ್  ಈ ಮಸೂದೆಯನ್ನು ಮಂಡಿಸಿದರು. ಸಮಾಜವಾದಿ ಪಕ್ಷದ ತೀವ್ರ ಪ್ರತಿಭಟನೆಯ ನಡುವೆಯೂ ಥಾವರ್ ಚಂದ್ ಗ್ಲೆಹೋಟ್ ಈ ಮಸೂದೆಯನ್ನು ಮಂಡಿಸಿದರು. ಮಸೂದೆ ಮೇಲೆ ಈಗ ಚರ್ಚೆ ಆರಂಭವಾಗಿದೆ.

2019ರ ಲೋಕಸಭಾ ಚುನಾವಣೆಗೆ ಕೇವಲ 100 ದಿನ  ಬಾಕಿ ಇರುವಂತೆಯೇ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ, 10 ರಷ್ಟು ಮೀಸಲಾತಿ ಒದಗಿಸುವ ಮಸೂದಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ  ಅನುಮೋದನೆ ನೀಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com