ಮಧ್ಯಪ್ರದೇಶ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಹಣದ ಆಮಿಷವೊಡ್ಡುತ್ತಿದೆ: ದಿಗ್ವಿಜಯ್ ಸಿಂಗ್

ಕಮಲ್ ನಾಥ್ ನೇತೃತ್ವದ ಸರ್ಕಾರವನ್ನು ಕೆಳಗಿಳಿಸುವ ಸಲುವಾಗಿ ಬಿಜೆಪಿ ಮಧ್ಯಪ್ರೇದಶದ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಹಣದ ಆಮಿಷವೊಡ್ಡುತ್ತಿದೆ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ...
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್
ಭೋಪಾಲ್: ಕಮಲ್ ನಾಥ್ ನೇತೃತ್ವದ ಸರ್ಕಾರವನ್ನು ಕೆಳಗಿಳಿಸುವ ಸಲುವಾಗಿ ಬಿಜೆಪಿ ಮಧ್ಯಪ್ರೇದಶದ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಹಣದ ಆಮಿಷವೊಡ್ಡುತ್ತಿದೆ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ. 
ಮಧ್ಯಪ್ರದೇಶದಲ್ಲಿ 15 ವರ್ಷಗಳ ಬಳಿಕ ವಿರೋಧ ಪಕ್ಷವಾಗಿರುವುದನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸರ್ಕಾರವನ್ನು ಅಸ್ಥಿರಗೊಳಿಸಿಲು ಬಿಜೆಪಿಯು ಕಾಂಗ್ರೆಸ್ ಶಾಸಕರಿಗೆ ಕೋಟಿಗಟ್ಟಲೆ ಹಣದ ಆಮಿಷವನ್ನು ಒಡ್ಡುತ್ತಿದೆ ಎಂದು ಹೇಳಿದ್ದಾರೆ. 
ಬಿಜೆಪಿಗೆ ಸೇರ್ಪಡೆಗೊಳ್ಳುವಂತೆ ರೂ.5-10 ಕೋಟಿ ಆಮಿಷವನ್ನುವೊಡ್ಡಲಾಗಿದ್ದು, ಬಿಜೆಪಿ ಆಮಿಷವೊಡ್ಡಿರುವ ಆ ಶಾಸಕರು ಯಾರೆಂಬುದನ್ನು ನಾನು ಹೇಳಬಲ್ಲೆ. ಆದರೆ, ಒಂದರ ಭರವಸೆಯಂತೂ ನಾನು ನೀಡಬಲ್ಲೆ, ಒಬ್ಬೇ ಒಬ್ಬ ಶಾಸಕರ ಕೂಡ ಆಮಿಷಕ್ಕೊಳಗಾಗುವುದಿಲ್ಲ ಎಂದು ತಿಳಿಸಿದ್ದಾರೆ. 
ಇದರಂತೆ ಮಧ್ಯಪ್ರದೇಶದ ಲೋಕೋಪಯೋಗಿ ಹಾಗೂ ಪರಿಸರ ಸಚಿವ ಸಜ್ಜನ್ ಸಿಂಗ್ ವರ್ಮಾ ಅವರು ಮಾತನಾಡಿ, ಕೆಲ ಶಾಸಕರನ್ನು ಅಪಹರಣ ಮಾಡುವ ಯತ್ನಗಳನ್ನು ಕೂಡ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಆದರೆ ಈ ಆರೋಪಗಳನ್ನು ಬಿಜೆಪಿ ನಾಯಕರಾದ ನರೊತ್ತಮ್ ಮಿಶ್ರಾ ಹಾಗೂ ವಿಶ್ವಾಸ್ ಅವರು ತಳ್ಳಿಹಾಕಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com