ಭಾರತ್ ಬಂದ್; ದೇಶದ ಬೊಕ್ಕಸಕ್ಕೆ 28 ಸಾವಿರ ಕೋಟಿ, ರಾಜ್ಯದ ಬೊಕ್ಕಸಕ್ಕೆ 1100 ಕೋಟಿ ರೂ ನಷ್ಟ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ 2 ದಿನಗಳ ಭಾರತ್ ಬಂದ್ ಮತ್ತೆ ಜನ ಸಾಮಾನ್ಯರ ಮೇಲೆ ಬರೆ ಎಳೆದಿದ್ದು, ಬಂದ್ ನಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಬರೊಬ್ಬರಿ ಸುಮಾರು 28 ಸಾವಿರ ಕೋಟಿ ರೂ ನಷ್ಟವಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ 2 ದಿನಗಳ ಭಾರತ್ ಬಂದ್ ಮತ್ತೆ ಜನ ಸಾಮಾನ್ಯರ ಮೇಲೆ ಬರೆ ಎಳೆದಿದ್ದು, ಬಂದ್ ನಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಬರೊಬ್ಬರಿ ಸುಮಾರು 28 ಸಾವಿರ ಕೋಟಿ ರೂ ನಷ್ಟವಾಗಿದೆ ಎಂದು ತಿಳಿದುಬಂದಿದೆ.
ಮೋಟಾರುವಾಹನ ಕಾಯ್ದೆ ತಿದ್ದುಪಡಿ, ಕಾರ್ಮಿಕ ನೀತಿ ತಿದ್ದುಪಡಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರೆ ನೀಡಲಾಗಿದ್ದ ಬಂದ್ ನಿಂದಾಗಿ ಜನ ಜೀವನ ಅಸ್ಥವ್ಯಸ್ಥಗೊಂಡಿದ್ದು ಮಾತ್ರವಲ್ಲದೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೊಕ್ಕಸಕ್ಕೆ ಬರೊಬ್ಬರಿ ಸುಮಾರು 29 ಸಾವಿರ ಕೋಟಿಗೂ ಅಧಿಕ ನಷ್ಟವಾಗಿದೆ. ಪ್ರಮುಖವಾಗಿ ದೇಶಾದ್ಯಂತ ನಡೆದ ಬಂದ್ ನಿಂದಾಗಿ ಕೇಂದ್ರ ಸರ್ಕಾರಕ್ಕೆ ಸುಮಾರು 28 ಸಾವಿರ ಕೋಟಿ ರೂ ನಷ್ಟವಾಗಿದ್ದು, ರಾಜ್ಯದಲ್ಲಿ ನಡೆದ ಬಂದ್ ನಿಂದಾಗಿ ರಾಜ್ಯ ಸರ್ಕಾರಕ್ಕೆ ಸುಮಾರು 1100 ಕೋಟಿ ರೂಗಳು ನಷ್ಟವಾಗಿದೆ ಎಂದು ತಿಳಿದುಬಂದಿದೆ.
ಈ  ಬಗ್ಗೆ ಕರ್ನಾಟಕ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಮಹಾಸಂಸ್ಛೆಯ ಮೂಲಗಳು ಮಾಹಿತಿ ನೀಡಿದ್ದು, 2 ದಿನಗಳ ಬಂದ್ ನಿಂದಾಗಿ ಸಾರಿಗೆ, ಕೃಷಿ. ಕೈಗಾರಿಕೆ, ಮಾರುಕಟ್ಟೆ, ವ್ಯಾಪಾರ, ವಾಣಿಜ್ಯೋದ್ಯಮ ಸೇರಿದಂತೆ ಬಹುತೇಕ ಎಲ್ಲ ವಿಭಾಗಗಳೂ ನಷ್ಟ ಅನಭವಿಸಿದ್ದು, ಇದರಿಂದ ರಾಜ್ ಸರ್ಕಾರದ ಬೊಕ್ಕಸಕ್ಕೆ ಸುಮಾರು 1100 ಕೋಟಿ ರೂ ನಷ್ಟವಾಗಿದೆ ಎಂದು ತಿಳಿದುಬಂದಿದೆ.
2ನೇ ದಿನವೂ ಬಂದ್ ಗೆ ನೀರಸ ಪ್ರತಿಕ್ರಿಯೆ
ಇನ್ನು ಜನ ಸಾಮಾನ್ಯರಿಗೆ ಬೇಡವಾಗಿದ್ದ ಬಂದ್ ಗೆ 2ನೇ ದಿನವೂ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ರಾಜಧಾನಿ ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಬಂದ್ ಬಿಸಿ ಜನ ಸಾಮಾನ್ಯರಿಗೆ ತಟ್ಟಿದರೂ ರಾಜ್ಯದ ವಿವಿಧೆಡೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com