ವಿಶ್ವದಲ್ಲಿ ಮೋದಿಯಂತೆ ಪ್ರಸಿದ್ಧ ನಾಯಕರು ಬೇರೆ ಇಲ್ಲ, ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಅಡ್ಡಗಾಲು: ಅಮಿಶ್ ಶಾ

ಪ್ರಧಾನಿ ನರೇಂದ್ರ ಮೋದಿ ಅವರಂತೆ ಪ್ರಸಿದ್ಧಿ ಪಡೆದ ನಾಯಕರು ಇಡೀ ಜಗತ್ತಿನಲ್ಲಿಯೇ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಅಮಿತ್ ಶಾ
ಅಮಿತ್ ಶಾ
Updated on: 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಂತೆ ಪ್ರಸಿದ್ಧಿ ಪಡೆದ ನಾಯಕರು ಇಡೀ ಜಗತ್ತಿನಲ್ಲಿಯೇ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಮಾತನಾಡಿದ ಅಮಿತ್ ಶಾ, ತನ್ನದೇ ಆದ ವರ್ಚಸ್ಸಿನಿಂದ ಇಡೀ ಜಗತ್ತಿನಾದ್ಯಂತ ಪ್ರಸಿದ್ಧಿಯಾಗಿರುವ ಪ್ರಧಾನಿ ನರೇಂದ್ರ ಮೋದಿ, ದೇಶಕ್ಕೆ ಜಾಗತಿಕ ಮನ್ನಣೆ ತಂದುಕೊಟ್ಟಿದ್ದಾರೆ ಎಂದರು.
ರಾಮಮಂದಿರವನ್ನು ಶೀಘ್ರದಲ್ಲಿಯೇ ನಿರ್ಮಾಣ ಮಾಡಲಾಗುತ್ತದೆ. ಈ  ಕುರಿತ ಪ್ರಕರಣವನ್ನು ಸುಪ್ರೀಂಕೋರ್ಟ್ ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ. ಆದರೆ, ಕಾಂಗ್ರೆಸ್  ಅಡ್ಡಿಯನ್ನುಂಟುಮಾಡುತ್ತಿದೆ ಎಂದು ಆರೋಪಿಸಿದರು. ಅಸ್ಸಾಂನಲ್ಲಿ ಸರ್ಬಾನಂದಾ ಸೂನೂವಾಲ್ ಸರ್ಕಾರ ಬಂದ ನಂತರ ಎನ್ ಆರ್ ಸಿ ಪಟ್ಟಿ ತಯಾರಿಸಲಾಗಿದೆ ಎಂದು ಹೇಳಿದರು.

1.5 ಕೋಟಿ ರೂ. ವಹಿವಾಟಿನೊಂದಿಗೆ ಸಂಯೋಜನೆ ಯೋಜನೆಯನ್ನು ಸ್ವೀಕರಿಸುವ ವ್ಯಾಪಾರಿಗಳು ಕೇವಲ ಶೇ. 1%  ರಷ್ಟು ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಈ ನಿರ್ಧಾರದಿಂದ  ಲಕ್ಷಾಂತರ ಸಣ್ಣ ಉದ್ಯಮಿಗಳು ಮತ್ತು ಸಣ್ಣ ಕೈಗಾರಿಕೆಗಳಿಗೆ ಅನುಕೂಲವಾಗಲಿದೆ ಎಂದು  ತಿಳಿಸಿದರು.
ಉತ್ತರ ಪ್ರದೇಶದಲ್ಲಿ ರಾಜ್ಯ ಬಿಜೆಪಿ ಘಟಕದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, 74 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ಆದರೆ, ಗೆಲುವಿನ ಅಂತರ 72 ಕ್ಕಿಂತಲೂ ಕಡಿಮೆಯಾಗಲಾರದು  ಎಂದು ಅಮಿಶ್ ಶಾ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com