ಎಸ್ಪಿ-ಬಿಎಸ್ಪಿ ಮೈತ್ರಿ ಬಗ್ಗೆ ಕಾಂಗ್ರೆಸ್ ಮೌನ: ಉ.ಪ್ರ. ಲೋಕಸಭೆ ಚುನಾವಣೆಯಲ್ಲಿ 'ಕೈ' ಏಕಾಂಗಿ ಹೋರಾಟ?

ಉತ್ತರಪ್ರದೇಶದ ಎಸ್ಪಿ-ಬಿಎಸ್ಪಿ ಮೈತ್ರಿಕೂಟದಿಂದ ಹೊರಗುಳಿದಿರುವ ಕಾಂಗ್ರೆಸ್, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮೂಲಗಳು ಹೇಳಿದೆ.
ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್
ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್
Updated on
ನವದೆಹಲಿ: ಉತ್ತರಪ್ರದೇಶದ ಎಸ್ಪಿ-ಬಿಎಸ್ಪಿ ಮೈತ್ರಿಕೂಟದಿಂದ ಹೊರಗುಳಿದಿರುವ ಕಾಂಗ್ರೆಸ್, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮೂಲಗಳು ಹೇಳಿದೆ.
ಉತ್ತರ ಪ್ರದೇಶದಲ್ಲಿ ಬದ್ದ ವೈರಿ ಪಕ್ಷಗಳಾದ ಸಮಾಜವಾದಿ ಪಕ್ಷ (ಎಸ್ಪಿ) ಹಾಗೂ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಒಂದಾಗಿರುವ ಬಗ್ಗೆ ಮೌನ ತಾಳಿರುವ ಕಾಂಗ್ರೆಸ್ ಮೈತ್ರಿಕೂಟದಿಂದ ಹೊರಗುಳಿಯುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ.
ಮಾಯಾವತಿ ಹಾಗೂ ಅಖಿಲೇಶ್ ಯಾದವ್ ಮೈತ್ರಿ ಕುರಿತು ನಾವೀಗಲೇ ಏನನ್ನೂ ಹೇಳುವುದಿಲ್ಲ, ಭಾನುವಾರ ಲಖನೌನಲ್ಲಿ ಈ ಕುರಿತಂತೆ ವಿವರವಾಗಿ ಪ್ರತಿಕ್ರಯಿಸಲಿದ್ದೇವೆ ಎಂದು ಉತ್ತರ ಪ್ರದೇಶದ ರಾಜ್ಯದ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ರಾಜ್ ಬಬ್ಬರ್, ಕಾಂಗ್ರೆಸ್ ಶಾಸಕಾಂಗ ಪಕ್ಷದಮುಖಂಡ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಮತ್ತು ಮಾಜಿ ಸಂಸದ ಪ್ರಮೋದ್ ತಿವಾರಿ  ಅವರುಗಳನ್ನು ಆಜಾದ್ ಅವರ ನಿವಾಸದಲ್ಲೇ ಇಂದು ಭೇಟಿಯಾಗಿದ್ದಾರೆ.
"ನಾವು ಈಗಲೇ ಏನನ್ನೂ ಹೇಳಲಾರೆವು. ಈ ವಿಷಯದ ಕುರಿತು ಯಾವುದೇ ನಾಯಕರು ತಮ್ಮ ವೈಯಕ್ತಿಕ ಹೇಳಿಕೆ ನಿಡುವುದಿಲ್ಲ ಭಾನುವಾರ ಈ ಸಂಬಂಧ ವಿವರವಾದ ಪ್ರತಿಕ್ರಿಯ್ತೆ ಬರಲಿದೆ ಎಂದು ಅವರು ಹೇಳಿದ್ದಾರೆ.
ಇನ್ನು ಉತ್ತರ ಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿಯಿಂದ ಕಾಂಗ್ರೆಸ್ ಗೆ ಹಿನ್ನಡೆ ಆಗಲಿದೆಯೆ ಎಂಬ ಪ್ರಶ್ನೆಗೆ ಸಹ ಅವರು ಉತ್ತರಿಸಲು ನಿರಾಕರಿಸಿದ್ದಾರೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಕಾಂಗ್ರೆಸ್ ನಾಯಕರಾದ ಕಮಲ್ ನಾಥ್ ಮಾತನಾಡಿ ಬಿಜೆಪಿಯನ್ನು ಮಣಿಸಲು ದೇಶಾದ್ಯಂತ ಮೈತ್ರಿಕೂಟದ ಅಗತ್ಯವಿದೆಎಂದರು. 2014 ರ ಲೋಕಸಭೆ ಚುನಾವಣೆಯಲ್ಲಿ ಕೇಸರಿ ಪಕ್ಷವು ಕೇವಲ ಶೇ.31 ರಷ್ಟು ಸೀಟುಗಳನ್ನು ಪಡೆದಿತ್ತು.ಅದು ನರ ಆಜ್ಞೆ. ಅದರಲ್ಲಿಯೂ ಮತಗಳ ವಿಭಜನೆ ಕಾರಣದಿಂದ ಇದು ಉಂಟಾಗಿದೆ ಎಂದು ಕಮಲ್ ನಾಥ್ ಹೇಳಿದ್ದಾರೆ.
ಹೀಗಿದ್ದರೂ ಬಿಎಸ್ಪಿ-ಎಸ್ಪಿ ಮೈತ್ರಿಯು  ಬಿಜೆಪಿ ವಿರುದ್ಧ ಎಲ್ಲಾ ವಿರೋಧ ಪಕ್ಷಗಳು ಒಂದುಗೂಡಿಸಲು ಕಾಂಗ್ರೆಸ್ ನಡೆಸುತ್ತಿರುವ ಪ್ರಯತ್ನಕ್ಕೆ ಒಂದು ಬಲವಾದ ಹೊಡೆತ ನೀಡಲಿದೆ ಎಂದು ಪಕ್ಷದ ಆಂತರಿಕ ಮೂಲಗಳು ಅಭಿಪ್ರಾಯಪಟ್ಟಿದೆ. ಆದರೆ ಇನ್ನೂ ಕೆಲವರು ಹೇಳಿದಂತೆ ಉತ್ತರ ಪ್ರದೇಶದಲ್ಲಿ ಪಕ್ಷ ಏಕಾಂಗಿಯಾಗಿ ಹೋರಾಡಿದ್ದಾದರೆ ಹೆಚ್ಚಿನ ಸ್ಥಾನ ಗಳಿಸಲಿದೆ. ಇದು ತಳಮಟ್ಟದಲ್ಲಿ ಇನ್ನಷ್ಟು ಪಕ್ಷ ಬಲವರ್ಧನೆಗೆ ಕಾರಣವಾಗಲಿದೆ.ರಾಜ್ಯದಲ್ಲಿನ ಪಕ್ಷದ ಕಾರ್ಯಕರ್ತರಿಗೆ ನೈತಿಕ ಬಲ ನೀಡಲಿದೆ.ಎಂದು ಅವರು ಹೇಳಿದರು.ಇನ್ನು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಗೆ ಏಕಾಂಗಿ ಹೋರಾಟದ ಹೊರತು ಬೇರೆ ಆಯ್ಕೆಗಳಿಲ್ಲ ಎಂದು ಓರ್ವ ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ)ಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ರಾಷ್ಟ್ರೀಯ ಜನತಾ ದಳದ (ಆರ್ಜೆಡಿ) ತೇಜಶ್ವಿ ಯಾದವ್  ಉತ್ತರ ಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ವನ್ನು ಸೋಲಿಸಲು ಇದು ಅಗತ್ಯವಾಗಿದೆ ಎಂದು ಅವರು ಭಾವಿಸಿದರು.
ಉತ್ತರ ಪ್ರದೇಶದ 80 ಲೋಕಸಭೆ ಸ್ಥಾನಗಳ ಪೈಕಿ ಸೋನಿಯಾ ಗಾಂಧಿ ಪ್ರತಿನಿಧಿಸುವ ರಾಯ್ ಬರೇಲಿ ಹಾಗೂ ರಾಹುಲ್ ಗಾಂಧಿ ಅವರ ಅಮೇಥಿ ಹೊರತಾಗಿ ಉಳಿದ 76 ಸ್ಥಾನಗಳಿಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲುಬಿಎಸ್ಪಿ ಹಾಗೂ ಎಸ್ಪಿ ತೀರ್ಮಾನಿಸಿದ್ದು ದೇಶದ ಅತ್ಯಂತ ಹಳೆಯ ರಾಷ್ಟ್ರೀಯ ಪಕ್ಷವನ್ನು ಮೂಲೆಗುಂಪಾಗಿಸಲು ಯತ್ನಿಸಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com