ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೇರಿ ಇಬ್ಬರಿಗೆ ಸುಪ್ರೀಂ ಭಡ್ತಿ: ಕೊಲೀಜಿಯಂ ಶಿಫಾರಸು

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸಂಜೀವ್...
ದಿನೇಶ್ ಮಹೇಶ್ವರಿ, ಸಂಜೀವ್ ಖನ್ನಾ
ದಿನೇಶ್ ಮಹೇಶ್ವರಿ, ಸಂಜೀವ್ ಖನ್ನಾ
Updated on
ನವದೆಹಲಿ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡುವಂತೆ ಸುಪ್ರೀಂ ಕೋರ್ಟ್​ನ ಕೊಲೀಜಿಯಂ ಶಿಫಾರಸು ಮಾಡಿದೆ
ಜನವರಿ 10ರಂದು ನಡೆದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಐವರು ಸದಸ್ಯರನ್ನೊಳಗೊಂಡ ಕೊಲೀಜಿಯಂ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಹೈಕೋರ್ಟ್ ನ್ಯಾಯಮೂರ್ತಿಗಳ ಹಿರಿತನ ಪಟ್ಟಿಯಲ್ಲಿ ನ್ಯಾ. ದಿನೇಶ್ ಮಹೇಶ್ವರಿ ಅವರು 21ನೇ ಸ್ಥಾನದಲ್ಲಿದ್ದರೆ, ನ್ಯಾ. ಸಂಜೀವ್ ಖನ್ನಾ ಅವರು 33ನೇ ಸ್ಥಾನದಲ್ಲಿದ್ದಾರೆ.
ಸರ್ವೋಚ್ಚ ನ್ಯಾಯಾಲಯದಲ್ಲಿ ಸದ್ಯಕ್ಕೆ 5 ನ್ಯಾಯಮೂರ್ತಿಗಳ ಸ್ಥಾನ ಖಾಲಿ ಇದ್ದು, ಇದರಲ್ಲಿ ಇಬ್ಬರನ್ನು ತುಂಬಿಸಿಕೊಳ್ಳಲು ಕೊಲೀಜಿಯಂ ನಿರ್ಧರಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com