ಉ.ಪ್ರ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿಯಲ್ಲಿ ಮೃತ ಡಿಎಸ್ಪಿ ಹೆಸರು!

ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ಇತ್ತೀಚಿನ ವರ್ಗಾವಣೆಯಲ್ಲಿ ಮೃತಪಟ್ಟ ಪೊಲೀಸ್ ಉಪ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಲಕ್ನೋ: ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ಇತ್ತೀಚಿನ ವರ್ಗಾವಣೆಯಲ್ಲಿ ಮೃತಪಟ್ಟ ಪೊಲೀಸ್ ಉಪ ಅಧೀಕ್ಷಕ(ಡಿಎಸ್ಪಿ) ಸತ್ಯ ನಾರಾಯಣ್ ಸಿಂಗ್ ಅವರ ಹೆಸರು ಅಚ್ಚರಿ ಮೂಡಿಸಿದೆ.

ವರ್ಗಾವಣೆ ಪಟ್ಟಿ ಹೊರಬಿದ್ದು ಈ ವಿಷಯ ಬಹಿರಂಗವಾಗುತ್ತಿದ್ದಂತೆ ಉತ್ತರ ಪ್ರದೇಶ ಪೊಲೀಸ್ ಮಹಾ ನಿರ್ದೇಶಕ ಒಪಿ ಸಿಂಗ್ ಆಗಿರುವ ಪ್ರಮಾದಕ್ಕೆ ಕ್ಷಮೆ ಕೇಳಿದ್ದು ಆರೋಪಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದಾರೆ.

ಇಂದಿನ ವರ್ಗಾವಣೆ ಆದೇಶದಲ್ಲಿ ಮೃತಪಟ್ಟಿರುವ ಉಪ ಅದೀಕ್ಷಕ ಸತ್ಯ ನಾರಾಯಣ್ ಸಿಂಗ್ ಅವರ ಹೆಸರು ಇರುವುದಕ್ಕೆ ತೀವ್ರ ವಿಷಾದಿಸುತ್ತೇನೆ. ಇಂತಹ ತಪ್ಪುಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಮತ್ತು ಪೊಲೀಸ್ ಇಲಾಖೆಯಿಂದ ಆಗಿರುವ ತಪ್ಪಿಗೆ ನಾನು ಕ್ಷಮೆ ಕೇಳುತ್ತೇನೆ. ತಪ್ಪಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ ಮತ್ತು ಮುಂದಿನ ಬಾರಿ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ನಿನ್ನೆ ಬಿಡುಗಡೆಯಾದ ಪಟ್ಟಿಯಲ್ಲಿ ರಾಜ್ಯದ ಪೊಲೀಸ್ ಅಧಿಕಾರಿಗಳಾದ ಅಶೋಕ್ ಕುಮಾರ್, ಸುರೇಂದ್ರ ಯಾದವ್, ಕೈಲಾಶ್ ಚಂದ್ರ ಪಾಂಡೆ, ಓಂಕಾರ್ ಯಾದವ್ ಮೊದಲಾದವರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com