ಸುಪ್ರೀಂ ಕೋರ್ಟ್
ದೇಶ
ಮಮತಾಗೆ ಭಾರೀ ಹಿನ್ನೆಡೆ: ಪ. ಬಂಗಾಳದಲ್ಲಿ ಬಿಜೆಪಿ ರಥಯಾತ್ರೆಗೆ ಸುಪ್ರೀಂ ಹಸಿರು ನಿಶಾನೆ!
ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಪ್ರಸ್ತಾವಿತ ರ್ಯಾಲಿ ಹಾಗು ಸಾರ್ವಜನಿಕ ಸಭೆ - ಗಣತಂತ್ರ ಬಚಾವೋ...
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಪ್ರಸ್ತಾವಿತ ರ್ಯಾಲಿ ಹಾಗು ಸಾರ್ವಜನಿಕ ಸಭೆ - ಗಣತಂತ್ರ ಬಚಾವೋ ಯಾತ್ರಾಗೆ ಅನುಮತಿ ನೀಡಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಮಮತಾ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರಕ್ಕೆ ಸುಪ್ರೀಂ ಸೂಚನೆಯಿಂದ ದೊಡ್ಡ ಹಿನ್ನಡೆಯಾದಂತಾಗಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠವು ಬಿಜೆಪಿಯ ಪಶ್ಚಿಮ ಬಂಗಾಳ ಘಟಕ ತನ್ನ ಪ್ರಸ್ತಾವಿತ "ರಥಯಾತ್ರೆ"ಯ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕಾರಿಗಳಿಗೆ ಸಲ್ಲಿಸಲು ಮತ್ತು ಅಗತ್ಯ ಅನುಮೋದನೆಗಳನ್ನು ಪಡೆದುಕೊಳ್ಲಲು ಸೂಚಿಸಿದೆ.
ನ್ಯಾಯಮೂರ್ತಿಗಳಾದ ಎಲ್. ಎನ್.ರಾವ್ ಮತ್ತು ಎಸ್.ಕೆ. ಕೌಲ್ ಅವರನ್ನೂ ಒಳಗೊಂಡ ನ್ಯಾಯಪೀಠ ಸಂವಿಧಾನದ ಅಡಿಯಲ್ಲಿ ಬರುವ ಅಭಿವ್ಯಕ್ತಿ ಸ್ವಾತಂತ್ರದ ತಳಹದಿಯೊಂದಿಗೆ ಭಾಷಣ, ಹಾಗೂ ರಥಯಾತ್ರೆಗೆ ಪಶ್ಚಿಮ ಬಂಗಾಳ ಸರ್ಕಾರ ಅನುಮತಿ ನೀಡಬೇಕೆಂದು ಹೇಳಿದೆ.
ಇದೇ ವೇಳೆ ರಾಜ್ಯ ಸರ್ಕಾರ ವಾದಿಸಿರುವಂತೆ ರಥಯಾತ್ರೆ ನಡೆದರೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎನ್ನುವುದು ಸಹ ಆಧಾರರಹಿತವಾದದ್ದಲ್ಲ ಎಂದಿರುವ ಕೋರ್ಟ್ ಯಾವುದೇ ಕಾರಣಕ್ಕೆ ಸಮಾಜದಲ್ಲಿ ಶಾಂತಿ ಕದಡದಂತೆ, ಎಲ್ಲಿಯೂ ಕಾನೂನು ಸುವ್ಯವಸ್ಥೆ ಹಾಳಾಗದಂತೆ ಬಿಜೆಪಿ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ