9 ದಿನಗಳ ನಂತರ ಮುಂಬೈ ಬಸ್ ಮುಷ್ಕರ ಅಂತ್ಯ

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಸಾರ್ವಜನಿಕ ಸಾರಿಗೆ ಸಂಸ್ಥೆ (ಬೆಸ್ಟ್‌) ನೌಕರರು ಕಳೆದ 9....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಮುಂಬೈ: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಸಾರ್ವಜನಿಕ ಸಾರಿಗೆ ಸಂಸ್ಥೆ (ಬೆಸ್ಟ್‌)  ನೌಕರರು ಕಳೆದ 9 ದಿನಗಳಿಂದ ನಡೆಸುತ್ತಿದ್ದ  ಮುಷ್ಕರ ಬುಧವಾರ ಅಂತ್ಯವಾಗಿದೆ. 
ಸುಮಾರು 15 ಸಾವಿರ ನೌಕರರಿಗೆ ಮಧ್ಯಂತರ ವೇತನ ಹೆಚ್ಚಳ ಮಾಡುವುದಾಗಿ ಆಡಳಿತ ಮಂಡಳಿ ಭರವಸೆ ನೀಡಿದ ನಂತರ ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಮತ್ತು ಟ್ರಾನ್ಸ್ಪೋರ್ಟ್ ಅಂಡರ್ಟೇಕಿಂಗ್ (ಬಿಇಎಸ್‌ಟಿ) ನೌಕರರ ಸಂಘ ಮುಷ್ಕರ ಹಿಂಪಡೆಯಲು ಒಪ್ಪಿಕೊಂಡಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಮುಷ್ಕರವನ್ನು ವಾಪಸ್ ಪಡೆದಿರುವುದಾಗಿ ನೌಕರರ ಸಂಘ ಇಂದು ಬಾಂಬೆ ಹೈಕೋರ್ಟ್ ಗೆ ತಿಳಿಸಿದೆ.
ಸಂಸ್ಥೆಯಲ್ಲಿ 32 ಸಾವಿರಕ್ಕೂ ಹೆಚ್ಚು ಮಂದಿ ಕಾರ್ಯನಿರ್ವಹಿಸುತ್ತಿದ್ದು, ಸಂಸ್ಥೆಯ ಮುಂಗಡಪತ್ರವನ್ನು ಬಿಎಂಸಿ (ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಶನ್)ನೊಂದಿಗೆ ವಿಲೀನಗೊಳಿಸುವುದು, ವೇತನ ಹೆಚ್ಚಳ ಸೇರಿದಂತೆ ಇತರೆ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ನಡೆಸುತ್ತಿದ್ದರು. 
ಬಸ್ ಮುಷ್ಕರದಿಂದಾಗಿ ಸತತ 9 ದಿನಗಳಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಸಂಸ್ಥೆಯಲ್ಲಿ 2,610 ಚಾಲಕರು ಮತ್ತು 2,764 ನಿರ್ವಾಹಕರು ಕಾರ್ಯನಿರ್ವಹಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com