ದೆಹಲಿ: ವಿದ್ಯಾರ್ಥಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪಿಎಚ್ ಡಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ತಮ್ಮ ಬಹುದಿನದ ಬೇಡಿಕೆಯಾದ ವಿದ್ಯಾರ್ಥಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಂಶೋಧನಾ ವಿದ್ಯಾರ್ಥಿಗಳು ಬುಧವಾರ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ದೆಹಲಿ: ತಮ್ಮ ಬಹುದಿನದ ಬೇಡಿಕೆಯಾದ ವಿದ್ಯಾರ್ಥಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಂಶೋಧನಾ ವಿದ್ಯಾರ್ಥಿಗಳು ಬುಧವಾರ ಮಾನವ ಸಂಪನ್ಮೂಲ ಸಚಿವಾಲಯದ ಮುಂದೆ ಪ್ರತಿಭಟನೆ ನಡೆಸಿದರು.
ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಅಖಿಲ ಭಾರತ ಸಂಶೋಧನಾ ವಿದ್ಯಾರ್ಥಿಗಳ ಸಂಘ(ಎಐಆರ್ ಎಸ್ಎ) ಇಂದು ಶಾಸ್ತ್ರಿ ಭವನದ ಮುಂದೆ ಪ್ರತಿಭಟನೆ ನಡೆಸಿತು. ಬಳಿಕ ಪ್ರತಿಭಟನೆಯನ್ನು ಜಂತರ್ ಮಂತರ್ ಗೆ ಸ್ಥಳಾಂತರಿಸಲಾಗಿದೆ.
ಕೆಲವರು ನಮ್ಮ ಬೇಡಿಕೆ ಈಡೇರಿಸುವವರೆಗೆ ಅನಿರ್ಧಿಷ್ಟಾವಧಿ ಉಪವಾಸ ಮಾಡಲು ಯೋಚಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 1ರಿಂದಲೇ ಜಾರಿಗೆ ಬರುವಂತೆ ವಿದ್ಯಾರ್ಥಿ ವೇತನವನ್ನು ಶೇ.80ರಷ್ಟು ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದೇವೆ ಎಂದು ಭಾರತೀಯ ಸಂಶೋಧನಾ ವಿದ್ಯಾರ್ಥಿಗಳ ರಾಷ್ಟ್ರೀಯ ಪ್ರತಿನಿಧಿ ನಿಖಿಲ್ ಗುಪ್ತ ಅವರು ಹೇಳಿದ್ದಾರೆ.
ಮೊದಲ ಸಂಪನ್ಮೂಲ ಸಚಿವಾಲಯದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದವು. ನಂತರ ಜಂತರ್ ಮಂತರ್ ಗೆ ಸ್ಥಳಾಂತರವಾಗಿದ್ದು, ಕೇಂದ್ರ ಸರ್ಕಾರ ನಮಗೆ ಹಲವು ಸುಳ್ಳು ಭರವಸೆಗಳನ್ನು ನೀಡುತ್ತಿದೆ ಎಂದರು.
ಜಾತಿ, ಹಣಕಾಸು ಸಂಸ್ಥೆಗಳು ಅಥವಾ ಪರೀಕ್ಷೆಗಳ ಆಧಾರದ ಮೇಲೆ ನಮ್ಮ ಒಗ್ಗಟ್ಟನ್ನು ಒಡೆಯಲು ಸಾಧ್ಯವಿಲ್ಲ. ವಿದ್ಯಾರ್ಥಿ ವೇತನ ಹೆಚ್ಚಳಕ್ಕಾಗಿ ನಾವು ಸರ್ಕಾರಕ್ಕೆ ಹಲವು ಪತ್ರಗಳನ್ನು ಬರೆದಿದ್ದೇವೆ. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಗುಪ್ತಾ ದೂರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com