ಅಮಿತ್ ಶಾ ಆರೋಗ್ಯದಲ್ಲಿ ಚೇತರಿಕೆ, ಇನ್ನೆರಡು ದಿನದಲ್ಲಿ ಡಿಸ್ಚಾರ್ಜ್: ಬಿಜೆಪಿ

ಎಚ್‌1ಎನ್‌1 ಸೋಂಕಿನಿಂದ ಬಳಲುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಬಿಜೆಪಿ ತಿಳಿಸಿದೆ....
ಅಮಿತ್ ಶಾ
ಅಮಿತ್ ಶಾ
Updated on
ನವದೆಹಲಿ: ಎಚ್‌1ಎನ್‌1 ಸೋಂಕಿನಿಂದ ಬಳಲುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ  ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಬಿಜೆಪಿ ತಿಳಿಸಿದೆ.
ಬುಧವಾರ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರ ಆರೋಗ್ಯ ಸುಧಾರಿಸುತ್ತಿದ್ದು ಅವರು ಇನ್ನೊಂದು ದಿನ ಅಥವಾ ಎರಡು ದಿನಗಳಲ್ಲಿ  ಆಸ್ಪತ್ರೆಯಿಂದ ಡಿಸ್‌ ಚಾರ್ಜ್‌ ಆಗಲಿದ್ದಾರೆ ಎಂದು ಹೇಳಿದೆ.
ಅಮಿತ್‌ ಶಾ ಅವರು ಬೇಗನೆ ಗುಣಮುಖವಾಗಲೆಂದು ಹಾರೈಸಿದ ಎಲ್ಲರಿಗೂ ಧನ್ಯವಾದಗಳು ಎಂದು ಪಕ್ಷದ ಮಾಧ್ಯಮ ಮುಖ್ಯಸ್ಥ ಮತ್ತು ರಾಜ್ಯಸಭಾ ಸದಸ್ಯ ಅನಿಲ್‌ ಬಲೂನಿ ಹೇಳಿದ್ದಾರೆ.
ಪರಿಣತ ವೈದ್ಯರ ತಂಡವು ಶಾ ಅವರಿಗೆ ಚಿಕಿತ್ಸೆ ನೀಡುತ್ತಿದ್ದು ಅವರ ಆರೋಗ್ಯದ ನಿಗಾವಣೆ ಮಾಡುತ್ತಿದೆ; ಅವರಲ್ಲಿ ಉತ್ತಮ ಚೇತರಿಕೆ ಕಂಡು ಬಂದಿದೆ ಎಂದು ಏಮ್ಸ್‌ ನಿರ್ದೇಶಕ ರಣದೀಪ್‌ ಗುಲೇರಿಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com