ನವದೆಹಲಿ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಶುಕ್ರವಾರ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿದ ದಿನೇಶ್ ಮಹೇಶ್ವರಿ ಹಾಗೂ ಸಂಜೀವ್ ಖನ್ನಾ ಅವರಿಗೆ ನಾಳೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿನ್ನೆಯಷ್ಚೇ ಕೇಂದ್ರ ಸರ್ಕಾರ ಈ ಇಬ್ಬರು ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕ ಮಾಡಿತ್ತು.
ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ ಜಿ.ಪರಮೇಶ್ವರ್ ಅವರು ಸುಪ್ರೀಂ ನ್ಯಾಯಾಧೀಶರಾಗಿ ನೇಮಕಗೊಂಡ ದಿನೇಶ್ ಮಹೇಶ್ವರಿ ಅವರನ್ನು ಭೇಟಿ ಮಾಡಿ, ಮುಂದಿನ ವೃತ್ತಿ ಜೀವನಕ್ಕೆ ಶುಭ ಕೋರಿದ್ದರು.