ಶಿವಕುಮಾರ ಶ್ರೀಗಳು, ಪ್ರಧಾನಿ ಮೋದಿ
ದೇಶ
ಡಾ. ಶಿವಕುಮಾರ ಸ್ವಾಮೀಜಿ ಬೇಗ ಗುಣ ಮುಖರಾಗಲಿ: ಪ್ರಧಾನಿ ಮೋದಿ ಟ್ವೀಟ್
ಸಿದ್ದಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿ ಬೇಗ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.
ತುಮಕೂರು: ಸಿದ್ದಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಬೆಳಗ್ಗೆ 5 ಗಂಟೆ ಸಮಯದಲ್ಲಿ ಸ್ವಾಮೀಜಿಗಳ ರಕ್ತ, ರಕ್ತದೊತ್ತಡ ಮತ್ತಿತರ ಪರೀಕ್ಷೆ ನಡೆಸಲಾಗಿದ್ದು, ವೆಂಟಿಲೇಷನ್ ಮೂಲಕ ಶ್ರೀಗಳಿಗೆ ಉಸಿರಾಟ ವ್ಯವಸ್ಥೆ ಮಾಡಲಾಗಿದೆ.
ನಮ್ಮ ಊಹೆಗೂ ನಿಲುಕದ ರೀತಿಯಲ್ಲಿ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಬಿಜಿಎಸ್ ಹಾಗೂ ಸಿದ್ದಗಂಗಾ ಮಠದ ಆಸ್ಪತ್ರೆಯಲ್ಲಿನ ವೈದ್ಯರ ತಂಡ ವರದಿಯಲ್ಲಿ ತಿಳಿಸಿದೆ.
ಈ ಮಧ್ಯೆ ಸ್ವಾಮೀಜಿಗಳು ಬೇಗ ಚೇತರಿಸಿಕೊಳ್ಳಲಿ ಎಂದು ಕೋರಿ ವಿವಿಧೆಡೆ ವಿಶೇಷ ಪ್ರಾರ್ಥನೆಗಳು ನಡೆಯುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದು, ಶ್ರೀಗಳು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಶಿವಕುಮಾರ್ ಸ್ವಾಮೀಜಿಗಳದ್ದು ಅಮೋಘ ವ್ಯಕ್ತಿತ್ವ. ಅವರ ಮಹೋನ್ನತ ಸೇವೆ ಕೋಟ್ಯಾಂತರ ಜನರ ಜೀವನದ ಮೇಲೆ ಸಕಾರಾತ್ಮಕ ಪ್ರಭಾವ ಬೀರಿದೆ. ಶ್ರೀಗಳು ಬೇಗ ಗುಣ ಮುಖರಾಗಲಿ ಎಂದು ಇಡೀ ರಾಷ್ಟ್ರ ಪ್ರಾರ್ಥಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
His Holiness Dr. Sree Sree Sree Sivakumara Swamigalu is a remarkable personality and has positively impacted crores of lives through his outstanding service.
— Narendra Modi (@narendramodi) January 17, 2019
The entire nation is praying for his speedy recovery and good health.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ