ಕ್ರೀಡಾ ಪ್ರಾಧಿಕಾರದಲ್ಲಿ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲ: ನಿರ್ದೇಶಕಿ ನೀಲಂ ಕಪೂರ್

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲ ಎಂದು ಪ್ರಾಧಿಕಾರದ ನಿರ್ದೇಶಕ ನೀಲಂ ಕಪೂರ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲ ಎಂದು ಪ್ರಾಧಿಕಾರದ ನಿರ್ದೇಶಕಿ ನೀಲಂ ಕಪೂರ್ ಹೇಳಿದ್ದಾರೆ.
ದೆಹಲಿಯಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ)ದ ಕಚೇರಿ ಮೇಲೆ ಸಿಬಿಐ ದಾಳಿ ಮಾಡಿ ನಾಲ್ಕು ಅಧಿಕಾರಿಗಳನ್ನು ಬಂಧಿಸಿರುವ ಹಿನ್ನಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಾಧಿಕಾರದ ನಿರ್ದೇಶಕಿ ನೀಲಂ ಕಪೂರ್ ಅವರು, ಪ್ರಾಧಿಕಾರದಲ್ಲಿ ಯಾವುದೇ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಆಸ್ಪದ ನೀಡುವುದಿಲ್ಲ. ಒಂದು ವೇಳೆ ಅಂತಹ ಚಟುವಟಿಕೆಗಳು ಕಂಡು ಬಂದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಅಂತೆಯೇ ಪ್ರಸ್ತುತ ಸಿಬಿಐ ಅಧಿಕಾರಿಗಳೂ ಕೂಡ ಯಾವುದೇ ಕ್ರಮ ಕೈಗೊಳ್ಳಲು ಸ್ವತಂತ್ರರು ಎಂದು ಹೇಳಿದರು.
ಭ್ರಷ್ಟಾಚಾರದ ದೂರುಗಳು ಬಂದ ಹಿನ್ನಲೆಯಲ್ಲಿ ಇಂದು ಸಂಜೆ ದೆಹಲಿಯಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದ ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಸುಮಾರು 4 ಗಂಟೆಗಳ ಶೋಧದ ಬಳಿಕ ಅಧಿಕಾರಿಗಳು ಕ್ರೀಡಾ ಪ್ರಾಧಿಕಾರದ ನಿರ್ದೇಶಕರಾದ ಎಸ್ ಕೆ ಶರ್ಮಾ, ಕಿರಿಯ ಅಕೌಂಟ್ಸ್ ಅಧಿಕಾರಿ ಹರಿಂದರ್ ಪ್ರಸಾದ್, ಸೂಪರ್ ವೈಸರ್ ಲಲಿತ್ ಜೋಲಿ, ಯುಡಿಸಿ ವಿಕೆ ಶರ್ಮಾ ಮತ್ತು ಖಾಸಗಿ ವ್ಯಕ್ತಿಗಳಾದ ಮಂದೀಪ್ ಅಹುಜಾ, ಅವರ ಸಹಾಯಕ ಯೂನುಸ್ ರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com