ಝಾಕಿರ್ ನಾಯಕ್
ಝಾಕಿರ್ ನಾಯಕ್

ಝಾಕಿರ್ ನಾಯ್ಕ್ ಗೆ ಸೇರಿದ ಮತ್ತೆ 16.4 ಕೋಟಿ ರು.ಮೌಲ್ಯದ ಆಸ್ತಿ ಮುಟ್ಟುಗೋಲು

ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್‌ಗೆ ಸೇರಿದ ಮತ್ತೆ 16.40 ಕೋಟಿ ರುಪಾಯಿ ಮೌಲ್ಯದ ಸ್ಥಿರಾಸ್ತಿಯನ್ನು...
ನವದೆಹಲಿ: ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್‌ಗೆ ಸೇರಿದ ಮತ್ತೆ 16.40 ಕೋಟಿ ರುಪಾಯಿ ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ(ಇಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಅಕ್ರಮ ಹಣ ವಹಿವಾಟು ತಡೆ ಕಾಯ್ದೆಯಡಿ, ಝಾಕಿರ್ ನಾಯ್ಕ್ ಗೆ ಸೇರಿದ ಮುಂಬೈ ಮತ್ತು ಪುಣೆಯಲ್ಲಿರುವ 16.40 ಕೋಟಿ ರುಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.
ಜಾರಿ ನಿರ್ದೇಶನಾಲಯ ಮೂರನೇ ಬಾರಿ ಝಾಕಿರ್ ನಾಯ್ಕ್ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಹಿಂದೆ ಝಾಕಿರ್ ನಾಯ್ಕ್ ಗೆ ಸೇರಿದ ಮೂರು ಸ್ಥಿರಾಸ್ತಿಗಳನ್ನು ಜಪ್ತಿ ಮಾಡಲಾಗಿತ್ತು.
ಕೋಮುವಾದ ಮತ್ತು ಭಯೋತ್ಪಾದನೆ ಪ್ರಚೋದಕ ಭಾಷಣಗಳನ್ನು ಪ್ರಸ್ತುತ ಪಡಿಸಿರುವ ಆರೋಪದಡಿ ರಾಷ್ಟ್ರೀಯ ತನಿಖಾ ಸಂಸ್ಥೆ ಈಗಾಗಲೇ ಜಾಕಿರ್‌ ನಾಯಕ್‌ ವಿರುದ್ಧ ಪ್ರಕರಣ ದಾಖಲಿಸಿದ್ದು, ವಿದೇಶದಲ್ಲಿರುವ ಜಾಕಿರ್‌ ನಾಯಕ್‌ ನನ್ನು ವಿಚಾರಣೆಗೆ ಒಳಪಡಿಸಲು ಸಿದ್ಧತೆ ನಡೆಸಿದೆ.

Related Stories

No stories found.

Advertisement

X
Kannada Prabha
www.kannadaprabha.com