ರ್ಯಾಲಿಯಲ್ಲಿ ಐದು ಲಕ್ಷ ಜನರು ಭಾಗವಹಿಸಿದ್ದು, ಈ ಮೆಗಾ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ಜೆಡಿಯು ಉಚ್ಛಾಟಿತ ನಾಯಕ ಶರದ್ ಯಾದವ್, ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್, ಆರ್ ಜೆಡಿ ನಾಯಕ ತೇಜಸ್ವಿ ಯಾದವ್, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ನ್ಯಾಷನಲ್ ಕಾನ್ಫೆರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ, ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.