ಪ್ರಿಯಾಂಕಾ ಗಾಂಧಿಗೆ ಮಣೆ, ರಾಹುಲ್ ನಾಯಕತ್ವ ವೈಫಲ್ಯಕ್ಕೆ ಸಾಕ್ಷಿ: ಬಿಜೆಪಿ

ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಕ್ರಿಯ ರಾಜಕೀಯ ಪ್ರವೇಶಿಸಿರುವುದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಾಯಕತ್ವದ ವೈಫಲ್ಯಕ್ಕೆ ಸಾಕ್ಷಿಯಾಗಿದೆ....
ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ
ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ
Updated on: 
ನವದೆಹಲಿ: ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಕ್ರಿಯ ರಾಜಕೀಯ ಪ್ರವೇಶಿಸಿರುವುದು  ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಾಯಕತ್ವದ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಬುಧವಾರ ಟೀಕಿಸಿದೆ.
ಇಂದು ಪೂರ್ವ ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿಯಾಗಿ ಪ್ರಿಯಾಂಕಾ ಗಾಂಧಿ ನೇಮಕಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರು, ವಿವಿಧ ಪಕ್ಷಗಳು ಮೈತ್ರಿಯನ್ನು ತಿರಸ್ಕರಿಸಿದ ನಂತರ ಕಾಂಗ್ರೆಸ್​ ಕುಟುಂಬ ಮೈತ್ರಿಯನ್ನು ಆರಿಸಿಕೊಂಡಿದೆ. ರಾಹುಲ್​ ಗಾಂಧಿ ವಿಫಲವಾಗಿದ್ದು, ಅವರಿಗೆ ಕುಟುಂಬದ ಊರುಗೋಲು ಬೇಕಾಗಿದೆ ಎಂಬುದನ್ನು ಕಾಂಗ್ರೆಸ್​ ಸಾರ್ವಜನಿಕವಾಗಿ ಒಪ್ಪಿಕೊಂಡಿದೆ ಎಂದು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್‌ ಪಕ್ಷಕ್ಕೆ ಗಾಂಧಿ ಮಾತ್ರವೇ ಅಧ್ಯಕ್ಷರಾಗಲು ಸಾಧ್ಯ. ಬೇರೆ ಯಾರೂ ಅಲ್ಲ ಎಂಬುದು ಮತ್ತೆ ಸಾಬೀತಾಗಿದೆ ಎಂದರು.
ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಉತ್ತರ ಪ್ರದೇಶ ರಾಜಕಾರಣಕ್ಕೆ ತಂದಿರುವುದರಿಂದ ದೇಶದ ಒಟ್ಟಾರೆ ರಾಜಕಾರಣದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದ ಸಂಬಿತ್ ಪಾತ್ರ, ಕಾಂಗ್ರೆಸ್​ನ ಮುಂದಿನ ನಾಯಕ ಯಾರು ಎಂದು ಹೊಸ ಭಾರತ ಕೇಳುತ್ತಿದೆ. ಜವಾಹರ ​ಲಾಲ್​ ನೆಹರೂ, ಇಂದಿರಾ ಗಾಂಧಿ ಅವರ ಯಶಸ್ಸಿನ ಹಾದಿಯನ್ನು ರಾಜೀವ್​ ಗಾಂಧಿ, ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಅವರು ಅನುಸರಿಸುತ್ತಿದ್ದಾರೆ ಎಂದು ಕಾಂಗ್ರೆಸ್​ ಕುಟುಂಬ ರಾಜಕಾರಣವನ್ನು ಟೀಕಿಸಿದರು.
ಪ್ರಿಯಾಂಕಾ ಗಾಂಧಿ ಅವರು ತನ್ನ ತಾಯಿ ಸೋನಿಯಾ ಗಾಂಧಿ ಅನಾರೋಗ್ಯದಿಂದಾಗಿ ತೆರವುಗೊಳಿಸುವ ರಾಯ್‌ ಬರೇಲಿ ಕ್ಷೇತ್ರದಿಂದ ಈ ಬಾರಿ  ಲೋಕಸಭೆಗೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com