ಪುಣೆ: ಆರ್ಮಿ ಕಾಲೇಜ್ ಕ್ಯಾಂಪಸ್ ನಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ, ನೇಣು ಬಿಗಿದ ಸ್ಥಿತಿಯಲ್ಲಿ ಆರೋಪಿ ಶವ

7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಹತ್ಯೆ ಮಾಡಲಾಗಿದ್ದು, ಆರೋಪಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಪುಣೆಯ ಆರ್ಮಿ ಕಾಲೇಜ್ ಕ್ಯಾಂಪಸ್ ನಲ್ಲಿ ನಡೆದಿದೆ.
ಪುಣೆ: ಆರ್ಮಿ ಕಾಲೇಜ್ ಕ್ಯಾಂಪಸ್ ನಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ, ನೇಣು ಬಿಗಿದ ಸ್ಥಿತಿಯಲ್ಲಿ ಆರೋಪಿ ಶವ
ಪುಣೆ: ಆರ್ಮಿ ಕಾಲೇಜ್ ಕ್ಯಾಂಪಸ್ ನಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ, ನೇಣು ಬಿಗಿದ ಸ್ಥಿತಿಯಲ್ಲಿ ಆರೋಪಿ ಶವ
ಪುಣೆ:  ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಹತ್ಯೆ ಮಾಡಲಾಗಿದ್ದು, ಆರೋಪಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಪುಣೆಯ ಆರ್ಮಿ ಕಾಲೇಜ್ ಕ್ಯಾಂಪಸ್ ನಲ್ಲಿ ನಡೆದಿದೆ. 
ಆರ್ಮಿ ಕಾಲೇಜ್ ಕ್ಯಾಂಪಸ್ ಬಳಿಯೇ ಸಂತ್ರಸ್ತೆಯ ಮನೆ ಇದ್ದು, ಮನೆಯ ಬಳಿ ಅತ್ಯಾಚಾರವೆಸಗಿ ಆಕೆಯನ್ನು ಹತ್ಯೆ ಮಾಡಲಾಗಿದೆ, 24 ವರ್ಷದ ಆರೋಪಿ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 
ಬಾಲಕಿಯ ತಾಯಿ ಯುವಕನ ವಿವಾಹ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಕ್ಕಾಗಿ ಯುವಕ ಈ ದುಷ್ಕೃತ್ಯ ಎಸಗಿದ್ದಾನೆ ಎಂದು ಮೇಲ್ನೋಟಕ್ಕೆ ತಿಳಿಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
 ದುಷ್ಕೃತ್ಯ ಎಸಗಿದ ವ್ಯಕ್ತಿ ಹಾಗೂ ಯುವತಿಯ ತಾಯಿ ಇಬ್ಬರೂ ಸಿಎಂಇ (ಕಾಲೇಜ್ ಆಫ್ ಆರ್ಮಿ ಕ್ಯಾಂಪಸ್) ಮೆಸ್ ನಲ್ಲಿ ಕೆಲಸ ಮಾಡುತ್ತಿದ್ದರು ಹಾಗೂ ಹತ್ತಿರದಲ್ಲೇ ವಾಸಿಸುತ್ತಿದ್ದರು. ಬಾಲಕಿಯ ತಾಯಿ ಕೆಲಸ ಮುಕ್ತಾಯಗೊಳಿಸಿ ವಾಪಸ್ಸಾದ ವೇಳೆ ತನ್ನ ಮಗಳು ಪ್ರಜ್ಞೆ ಕಳೆದುಕೊಂಡು ಬಿದ್ದಿರುವ ಸ್ಥಿತಿಯಲ್ಲಿ ಬಿದ್ದಿದ್ದನ್ನು ಕಂಡಿದ್ದಾರೆ.  ಈ ವೇಳೆ ಅತ್ಯಾಚಾರ, ಕೊಲೆ ಪ್ರಕರಣ ಬಯಲಿಗೆ ಬಂದಿದೆ. 
ಯುವಕ ತನ್ನನ್ನು ವಿವಾಹವಾಗುವಂತೆ ಕೇಳಿದ್ದ. ಆದರೆ ಈ ಪ್ರಸ್ತಾವನೆಯನ್ನು ಆಕೆ ತಿರಸ್ಕರಿಸಿದ್ದಳು. ಜ.21 ರಂದು ಇದೇ ವಿಷಯವಾಗಿ ಯುವಕ ಹಾಗೂ ಮಹಿಳೆಯ ನಡುವೆ ವಾಗ್ವಾದ ನಡೆದಿದೆ. ಇದಾದ ಬಳಿಕ ಈ ಘಟನೆ ನಡೆದಿದೆ ಎಂದು ಮಹಿಳೆ ಪೊಲೀಸರೆದುರು ಹೇಳಿಕೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com