ಏಕಾಂಗಿಯಾದ ಕಾಂಗ್ರೆಸ್; ಆಂಧ್ರ ವಿಧಾನಸಭೆ, ಲೋಕಸಭೆಯಲ್ಲಿ ಏಕಾಂಗಿ ಸ್ಪರ್ಧೆ!

ತೀವ್ರ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್-ಟಿಡಿಪಿ ಮೈತ್ರಿಗೆ ಎಳ್ಳು ನೀರು ಬಿಟ್ಟಿದ್ದು ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ.
ರಾಹುಲ್ ಗಾಂಧಿ-ಚಂದ್ರಬಾಬು ನಾಯ್ಡು
ರಾಹುಲ್ ಗಾಂಧಿ-ಚಂದ್ರಬಾಬು ನಾಯ್ಡು
Updated on: 
ವಿಜಯವಾಡ: ತೀವ್ರ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್-ಟಿಡಿಪಿ ಮೈತ್ರಿಗೆ ಎಳ್ಳು ನೀರು ಬಿಟ್ಟಿದ್ದು ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ. 
ಕಾಂಗ್ರೆಸ್ ಅಧ್ಯಕ್ಷ, ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ಮಾತ್ರ ಆಂಧ್ರಪ್ರದೇಶಕ್ಕೆ ವಿಶೇಷ ರಾಜ್ಯ ಸ್ಥಾನಮಾನವನ್ನು ನೀಡಲು ಸಾಧ್ಯ ಎಂಬ ಅಭಿಪ್ರಾಯಗಳು ಕಂಡ ಬಂದ ಹಿನ್ನೆಲೆಯಲ್ಲಿ ಆಂಧ್ರ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್ ರಘುವೀರ ರೆಡ್ಡಿ ಹೇಳಿದ್ದಾರೆ. 
ರಾಹುಲ್ ಗಾಂಧಿ ಅವರು ಪ್ರಧಾನಿ ಆದರೆ ಮಾತ್ರ ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡಲು ಸಾಧ್ಯ ಎಂದು ಆಂಧ್ರದ ಜನರು ಸಹ ನಂಬಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಯಾವುದೇ ಪ್ರಾದೇಶಿಕ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಇನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 175 ಕ್ಷೇತ್ರ ಮತ್ತು 25 ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮನ್ ಚಾಂಡಿ ಅವರು ಹೈಕಮಾಂಡ್ ನಿರ್ಧಾರವನ್ನು ನಮಗೆ ತಿಳಿಸಿದ್ದಾರೆ ಎಂದು ರಘುವೀರ್ ರೆಡ್ಡಿ ಹೇಳಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ವಿರುದ್ಧ ಸ್ಪರ್ಧಿಸುವ ಸಲುವಾಗಿ ತೆಲುಗು ದೇಶಂ ಪಕ್ಷ(ಟಿಡಿಪಿ) ಅಧ್ಯಕ್ಷ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಪ್ರಾದೇಶಿಕ ಪಕ್ಷಗಳ ಜೊತೆಗೂಡಿ ಮಹಾಘಟಬಂಧನ್ ರಚಿಸಲು ಮುಂದಾಗುತ್ತಿದ್ದು ಇದು ಆಂಧ್ರದಲ್ಲಿ ಕಾಂಗ್ರೆಸ್ ಹಾಗೂ ಟಿಡಿಪಿ ಮೈತ್ರಿಗೆ ತೊಡಕುಂಟಾಗಿದೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com