ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಕಷ್ಟ: ಎಬಿಪಿ- ಸಿವೋಟರ್ ಸಮೀಕ್ಷೆ

ಲೋಕಸಭಾ ಚುನಾವಣೆಗೂ ಮುನ್ನ ಎಬಿಪಿ- ಸಿ ವೋಟರ್ ನಡೆಸಿದ ಸಮೀಕ್ಷೆ ವರದಿಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಮತ್ತೆ ಸ್ಪಷ್ಟ ಬಹುಮತ ಸಿಗುವ ಸಾಧ್ಯತೆಗಳು ಕಡಿಮೆ ಎನ್ನಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಎಬಿಪಿ- ಸಿ ವೋಟರ್ ನಡೆಸಿದ ಸಮೀಕ್ಷೆ ವರದಿಯಲ್ಲಿ  ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ  ಮತ್ತೆ ಸ್ಪಷ್ಟ ಬಹುಮತ ಸಿಗುವ ಸಾಧ್ಯತೆಗಳು ಕಡಿಮೆ ಎನ್ನಲಾಗಿದೆ.
ಎನ್ ಡಿಎ ಮೈತ್ರಿಕೂಟ ಕೇವಲ 233 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಮೈತ್ರಿಕೂಟವಾಗಲಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ 167 ಮತ್ತು  ಇತರ ಪಕ್ಷಗಳು 143 ಸ್ಥಾನಗಳಲ್ಲಿ ಗೆಲುವು ಸಾಧಿಸಲಿವೆ ಎಂದು ಸಮೀಕ್ಷೆ ಹೇಳಿದೆ.
ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಉತ್ತರ ಪ್ರದೇಶದ 80 ಕ್ಷೇತ್ರಗಳ ಪೈಕಿ 51 ಸ್ಥಾನಗಳಲ್ಲಿ  ಎಸ್ಪಿ- ಬಿಎಸ್ಪಿ ಹಾಗೂ ಆರ್ ಎಲ್ ಡಿ ಮೈತ್ರಿಕೂಟ, 25 ಸ್ಥಾನಗಳಲ್ಲಿ ಬಿಜೆಪಿ, ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್  ಜಯಗಳಿಸಲಿವೆ.
ಪಂಜಾಬಿನಲ್ಲಿ 13 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಯುಪಿಎ  ಭರ್ಜರಿ ಗೆಲುವು ಸಾಧಿಸಲಿದೆ. ದೆಹಲಿ, ಹಿಮಾಚಲ ಪ್ರದೇಶ , ಉತ್ತರ ಖಂಡ್,  ಹರಿಯಾಣ ಹಾಗೂ ಬಿಹಾರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದು ವರದಿಯಲ್ಲಿ ಹೇಳಲಾಗಿದೆ.
ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com