ಪಾಟ್ನಾ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ವಿರುದ್ಧ ಸೆಕ್ಸಿಸ್ಟ್ ಹೇಳಿಕೆ ನೀಡಿರುವ ಬಿಹಾರ ಬಿಜೆಪಿ ಸಚಿವ ವಿನೋದ್ ನಾರಾಯಣ್ ಝಾ ಅವರು, ಪ್ರಿಯಾಂಕಾ ಗಾಂಧಿ ಅವರು ಅತ್ಯಂತ ಸುಂದರವಾಗಿದ್ದಾರೆ. ಆದರೆ ಯಾವುದೇ ರಾಜಕೀಯ ಸಾಧನೆ ಮಾಡಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.
ನಿನ್ನೆಯಷ್ಟೇ ಪ್ರಿಯಾಂಕಾ ಗಾಂಧಿ ಅವರು ಸಕ್ರಿಯೆ ರಾಜಕೀಯ ಪ್ರವೇಶಿಸಿದ್ದು, ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಬಿಹಾರ ಸಚಿವ, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನೋಡಲು ಚೆನ್ನಾಗಿದ್ದಾರೆಂದು ಅವರನ್ನು ಪಕ್ಷಕ್ಕೆ ಕರೆತರಲಾಗಿದೆ ಎಂದರು.
ಪ್ರಿಯಾಂಕಾ ಸುಂದರವಾಗಿದ್ದಾರೆ. ಆದರೆ ಅಂದವಾದ ಮುಖ ಮತಗಳನ್ನು ಸೆಳೆಯಲು ಸಾಧ್ಯವಿಲ್ಲ ಎಂದು ಝಾ ಹೇಳಿದ್ದಾರೆ.
ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರು ಭೂ ಹಗರಣ ಸೇರಿದಂತೆ ಭ್ರಷ್ಟಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ. ಪ್ರಿಯಾಂಕಾ ಅವರು ಸುಂದವಾಗಿದ್ದಾರೆ ಅನ್ನೋದು ಬಿಟ್ಟರೆ ಯಾವುದೇ ರಾಜಕೀಯ ಅನುಭವ ಇಲ್ಲ ಎಂದು ಬಿಹಾರ ಸಚಿವ ಟೀಕಿಸಿದ್ದಾರೆ.