ಐಎನ್ಎಕ್ಸ್ ಪ್ರಕರಣದಲ್ಲಿ ಚಿದಂಬರಂ ವಶಕ್ಕೆ ಪಡೆಯಲು ಸಿಬಿಐ ಚಿಂತನೆ

ಐಎನ್ ಎಕ್ಸ್ ಮಾಧ್ಯಮ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ , ಕಾಂಗ್ರೆಸ್ ಹಿರಿಯ ಮುಖಂಡ ಪಿ. ಚಿದಂಬರಂ ಅವರನ್ನು ವಶಕ್ಕೆ ಪಡೆದುಕೊಳ್ಳಲು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಮುಂದಾಗಿದ್ದು, ಹೈಕೋರ್ಟ್ ನಲ್ಲಿ ಮನವಿ ಸಲ್ಲಿಸಿವೆ.
ಪಿ. ಚಿದಂಬರಂ
ಪಿ. ಚಿದಂಬರಂ

ನವದೆಹಲಿ: ಐಎನ್ ಎಕ್ಸ್ ಮಾಧ್ಯಮ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ , ಕಾಂಗ್ರೆಸ್ ಹಿರಿಯ ಮುಖಂಡ  ಪಿ. ಚಿದಂಬರಂ ಅವರನ್ನು ವಶಕ್ಕೆ ಪಡೆದುಕೊಳ್ಳಲು  ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಮುಂದಾಗಿದ್ದು, ಹೈಕೋರ್ಟ್ ನಲ್ಲಿ ಮನವಿ ಸಲ್ಲಿಸಿವೆ.

ಐಎನ್ ಎಕ್ಸ್ ಮಾಧ್ಯಮ ಹಗರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ಹಾಗೂ ಭ್ರಷ್ಟಾಚಾರದಲ್ಲಿ ಚಿದಂಬರಂ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಾಧೀಶ ಸುನೀಲ್ ಗೌರ್  ಮುಂದೆ ನಡೆಯುತ್ತಿದೆ.

ಈ ಸಂಬಂಧ ತೀರ್ಪನ್ನು ಹೈ ಕೋರ್ಟ್ ಕಾಯ್ದಿರಿಸಿದೆ. ನಿರೀಕ್ಷಣಾ ಜಾಮೀನು ಅರ್ಜಿ ಕುರಿತ ಮುಂದಿನ ಆದೇಶದವರೆಗೂ ಚಿದಂಬರಂ ಅವರನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆಯನ್ನು  ಕೋರ್ಟ್  ಒದಗಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com