ದೇಶದ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ನಿಯಂತ್ರಣಕ್ಕೆ ಆರ್ ಎಸ್ಎಸ್ ಯತ್ನ: ರಾಹುಲ್

Published On :
ಭುವನೇಶ್ವರ್: ಬಿಜೆಪಿ ಮಾತೃ ಪಕ್ಷ ಆರ್ ಎಸ್ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದಲ್ಲಿ ಆರ್ ಎಸ್ಎಸ್ ಮುದ್ರೆ ಸ್ಪಷ್ಟವಾಗಿ ಎದ್ದು ಕಾಣುತ್ತದೆ ಎಂದು ಶುಕ್ರವಾರ ಆರೋಪಿಸಿದ್ದಾರೆ.
ಆರ್ ಎಸ್ ಎಸ್ ದೇಶದ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಬಯಸುತ್ತಿದೆ ಮತ್ತು ದೇಶದಲ್ಲಿ ತಾನೊಂದೇ ಸಂವಿಧಾನಿಕ ಸಂಸ್ಥೆ ಎಂದು ನಂಬಿದೆ. ಇತರೆ ಎಲ್ಲಾ ಸಂಸ್ಥೆಗಳನ್ನು ನಾಶಪಡಿಸಲು ಮತ್ತು ಅವುಗಳನ್ನು ನಿಯಂತ್ರಿಸಲು ಯತ್ನಿಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಆರ್ ಎಸ್ ಎಸ್ ಮನಸ್ಥಿತಿಯಿಂದಾಗಿ ನ್ಯಾಯಾಂಗ ಹಾಗೂ ಶಿಕ್ಷಣ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಗೊಂದಲಕ್ಕೆ ಕಾರಣವಾಗಿದೆ ಎಂದಿದ್ದಾರೆ.
ಇಂದು ಭುವನೇಶ್ವರ್ ದಲ್ಲಿ ಬುದ್ಧಿಜೀವಿಗಳೊಂದಿಗೆ ಸಂವಾದ ನಡೆಸಿದ ರಾಹುಲ್ ಗಾಂಧಿ, 120 ಕೋಟಿ ಭಾರತೀಯರು ಈ ದೇಶವನ್ನು ಮುನ್ನಡೆಸಬೇಕು ಎಂಬ ಸಿದ್ಧಾಂತವನ್ನು ನಾವು ನಂಬಿದ್ದೇವೆ. ಆದರೆ ಯಾವುದೋ ಒಂದು ಸಿದ್ಧಾಂತ ಈ ದೇಶ ಮುನ್ನಡೆಸುವುದು ನಮಗೆ ಬೇಕಾಗಿಲ್ಲ ಎಂದರು.
ಬಿಜೆಪಿ ಮತ್ತು ಆರ್ ಎಸ್ಎಸ್ ನಿಂದ ನಾನು ಪಡೆದ ಬಹುದೊಡ್ಡ ಕೊಡುಗೆ ನಿಂದನೆ ಮತ್ತು ಅವಮಾನ ಎಂದು ರಾಹುಲ್ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರು ನನ್ನನ್ನು ನಿಂದಿಸಿದಷ್ಟೂ ನಾನು ಅವರನ್ನು ಅಪ್ಪಿಕೊಳ್ಳಲು ಇಷ್ಟ ಪಡುತ್ತೇನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


