ಗಣರಾಜ್ಯೋತ್ಸವ: ಜ.26 ರಂದೇ ಏಕೆ ಆಚರಣೆ, ಇಲ್ಲಿದೆ ಪ್ರತಿ ಭಾರತೀಯರು ತಿಳಿದುಕೊಳ್ಳಬೇಕಾದ ಮಾಹಿತಿ

ಜ.26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನ ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮ, ದೇಶಭಕ್ತಿಗಳಿಂದ ಆಚರಿಸುತ್ತೇವೆಯೋ ಅಷ್ಟೇ ಸಂಭ್ರಮದಿಂದ ಗಣರಾಜ್ಯೋತ್ಸವ ದಿನವನ್ನೂ ಆಚರಿಸುತ್ತೇವೆ.
ಗಣರಾಜ್ಯೋತ್ಸವ: ಜ.26 ರಂದೇ ಏಕೆ ಆಚರಣೆ, ಇಲ್ಲಿದೆ  ಪ್ರತಿ ಭಾರತೀಯರು ತಿಳಿದುಕೊಳ್ಳಬೇಕಾದ ಮಾಹಿತಿ
ಗಣರಾಜ್ಯೋತ್ಸವ: ಜ.26 ರಂದೇ ಏಕೆ ಆಚರಣೆ, ಇಲ್ಲಿದೆ ಪ್ರತಿ ಭಾರತೀಯರು ತಿಳಿದುಕೊಳ್ಳಬೇಕಾದ ಮಾಹಿತಿ
ನವದೆಹಲಿ: ಜ.26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನ ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮ, ದೇಶಭಕ್ತಿಗಳಿಂದ ಆಚರಿಸುತ್ತೇವೆಯೋ ಅಷ್ಟೇ ಸಂಭ್ರಮದಿಂದ ಗಣರಾಜ್ಯೋತ್ಸವ ದಿನವನ್ನೂ ಆಚರಿಸುತ್ತೇವೆ. 
ಆ.15 ಬ್ರಿಟಿಷರಿಂದ ತಾತ್ವಿಕವಾಗಿ ಸ್ವಾತಂತ್ರ್ಯ ಪಡೆದುಕೊಂಡ ದಿನವಾದರೆ, ಜ.26 1950 ಭಾರತ ತನ್ನ ಸಂವಿಧಾನವನ್ನು ಜಾರಿಗೊಳಿಸಿದ ದಿನ. ರಾಜಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ದಿನ. ಈ ಕಾರಣಕ್ಕಾಗಿ ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಅತ್ಯಂತ ಮಹತ್ವ ದಿನ. 
ಭಾರತ ತನ್ನದೇ ಆದ ಸಂವಿಧಾನವನ್ನು ಜಾರಿಗೆ ತರುತ್ತಿದ್ದಂತೆಯೇ   ಪ್ರಜಾಪ್ರಭುತ್ವ ಗಣರಾಜ್ಯವಾಗಿ ಬದಲಾಯಿತು. ಸರಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಜ.26 ರಂದೇ ಏಕೆ ಆಚರಣೆ ಮಾಡಲಾಗುತ್ತದೆ ಎಂಬುದಕ್ಕೆ ಇಲ್ಲಿದೆ ಮಾಹಿತಿ 
1929 ರ ಲಾಹೋರ್ ನಲ್ಲಿ ನಡೆದ ಕಾಂಗ್ರೆಸ್ ಸೆಷನ್ ನಲ್ಲಿ ಜವಹಾರ್ ಲಾಲ್ ನೆಹರು ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. 26, 1930 ಕ್ಕೆ ದೇಶ ಸಂಪೂರ್ಣ ಸ್ವಾತಂತ್ರ್ಯ  ಪಡೆಯಬೇಕೆಂಬ ನಿರ್ಣಯವನ್ನೂ ಕೈಗೊಳ್ಳಲಾಗಿತ್ತು. ಅದನ್ನೇ ಪೂರ್ಣ ಸ್ವರಾಜ್ ದಿವಸ್ ಅಥವಾ ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಘೋಷಣೆ ಮಾಡಲಾಗಿತು. ಆದರೆ ಇದು 1947 ವರೆಗೂ ಈಡೇರಲಿಲ್ಲ. ಆದ್ದರಿಂದ ನಿರ್ಣಯದಲ್ಲಿ ಕೈಗೊಂಡಂತೆ ಮೊದಲು ಆಚರಣೆ ಮಾಡಬೇಕೆಂದುಕೊಂಡಿದ್ದ ಸ್ವಾತಂತ್ರ್ಯ ದಿನದ ದಿನಾಂಕವಾದ ಜ.26 ರಂದೇ ಸಂವಿಧಾನವನ್ನು ಜಾರಿಗೊಳಿಸಲಾಯಿತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com