ಮಹಾರಾಷ್ಟ್ರದಲ್ಲಿ ಶಿವಸೇನೆಯೇ 'ದೊಡ್ಡಣ್ಣ': ಸಂಜಯ್ ರೌತ್

ಮಹಾರಾಷ್ಟ್ರದಲ್ಲಿ ಶಿವಸೇನೆಯೇ ದೊಡ್ಡಣ್ಣ ಮತ್ತು ಅದು ಹಾಗೆಯೇ ಉಳಿಯಬೇಕು ಎಂದು ಶಿವಸೇನಾ ವಕ್ತಾರ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ರೌತ್ ಅವರು ಸೋಮವಾರ ಹೇಳಿದ್ದಾರೆ.
ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ
ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ
ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆಯೇ ದೊಡ್ಡಣ್ಣ ಮತ್ತು ಅದು ಹಾಗೆಯೇ ಉಳಿಯಬೇಕು ಎಂದು ಶಿವಸೇನಾ ವಕ್ತಾರ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ರೌತ್ ಅವರು ಸೋಮವಾರ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಚುನಾವಣಾ ಪೂರ್ವ ಮೈತ್ರಿ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಂಜಯ್ ರೌತ್ ಅವರು, ನಮ್ಮ ನಾಯಕರು ಪಕ್ಷದ ಸಂಸದರು ಹಾಗೂ ರಾಜ್ಯಸಭಾ ಸದಸ್ಯರೊಂದಿಗೆ ಚುನಾವಣಾ ತಂತ್ರದ ಬಗ್ಗೆ ಚರ್ಚಿಸುತ್ತಿದ್ದಾರೆ ಎಂದರು.
ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಇದುವರೆಗೂ ಬಿಜೆಪಿಯಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ ಮತ್ತು ನಾವು ಅದಕ್ಕಾಗಿ ಕಾಯುವುದಿಲ್ಲ ಎಂದರು.
ಕಳೆದ 25 ವರ್ಷಗಳಿಂದ ಮಹಾರಾಷ್ಟ್ರದಲ್ಲಿ ಶಿವಸೇನೆಯೇ ಬಿಗ್ ಬ್ರದರ್ ಆಗಿದ್ದು, ಅದು ಮುಂದೆಯೂ ಮುಂದುವರೆಯಬೇಕು ಎಂದರು ರೌತ್ ಹೇಳಿದರು.
ಇದೇ ವೇಳೆ, ಬಜೆಟ್ ನಲ್ಲಿ ಆದಾಯ ತೆರಿಗೆ ಮಿತಿಯನ್ನು 8 ಲಕ್ಷ ರುಪಾಯಿಗೆ ಏರಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಎಂದು ರೌತ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com