ಆದರೆ, ಕೆಲವೇ ದಿನಗಳಲ್ಲಿ ಪೊಲೀಸರಿಗೆ ಈ ಪ್ರಕರಣದಲ್ಲಿ ಸಂಶಯಗಳು ಕಾಣತೊಡಗುತ್ತವೆ. ಶವದ ಸಮೀಪದಲ್ಲಿ ದೊರೆತಿದ್ದ ಡೈರಿಯೊಂದು ಹಲವು ಸುಳಿವನ್ನು ಬಿಟ್ಟುಕೊಡುತ್ತದೆ. ಆ ಡೈರಿಯಲ್ಲಿ ಪಾಟೀದಾರ್ ನ ಇನ್ಷೂರೆನ್ಸ್ ಪಾಲಿಸಿ ನಂಬರ್, ಬ್ಯಾಂಕ್ ನ ಫಿಕ್ಸೆಡ್ ಡೆಪಾಸಿಟ್, ಪಿನ್ ನಂಬರ್ ಇತ್ಯಾದಿ ವಿವರಗಳಿರುತ್ತವೆ. ಅಷ್ಟೇ ಅಲ್ಲದೆ, ಶವದಲ್ಲಿದ್ದ ಮೊಬೈಲ್ ಫೋನ್ ನಲ್ಲಿ ದೂರವಾಣಿ ಕರೆಯ ವಿವರವನ್ನೆಲ್ಲಾ ಅಳಿಸಿಹಾಕಲಾಗಿರುತ್ತದೆ. ಇದು ಪೊಲೀಸರಿಗೆ ಸಂಶಯದ ವಾಸನೆ ಬಿತ್ತಿ, ಶವದ ಡಿಎನ್ಎ ಪರೀಕ್ಷೆಗೆ ದಾರಿ ಮಾಡಿಕೊಡುತ್ತದೆ.