ಜಾರ್ಖಂಡ್ ನಲ್ಲಿ ಭೀಕರ ಎನ್ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ ಮೂವರು ನಕ್ಸಲರು ಹತ

ಮಂಗಳವಾರ ಮುಂಜಾನೆ ಜಾರ್ಖಂಡ್ ನಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿಗಳ ನಡುವೆ ಭೀಕರ ಎನ್ ಕೌಂಟರ್ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಮೂವರು ನಕ್ಸಲೀಯರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ರಾಂಚಿ: ಮಂಗಳವಾರ ಮುಂಜಾನೆ ಜಾರ್ಖಂಡ್ ನಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿಗಳ ನಡುವೆ ಭೀಕರ ಎನ್ ಕೌಂಟರ್ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಮೂವರು ನಕ್ಸಲೀಯರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.
ಜಾರ್ಖಂಡ್ ನ ಪಶ್ಚಿಮ ಸಿಂಗ್ ಭೂಮ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕನಿಷ್ಠ ಮೂವರು ನಕ್ಸಲೀಯರನ್ನು ಹತ್ಯೆಗೈಯ್ಯಲಾಗಿದೆ. 
ಸಿಂಗ್ ಭೂಮ್ ನ ಹೊರವಲಯದ ಅರಣ್ಯ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ನಕ್ಸಲ್ ಚಟುವಟಿಕೆ ನಡೆಯುತ್ತಿದ್ದ ಖಚಿತ ಮಾಹಿತಿ  ಪಡೆದ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ. ಈ ವೇಳೆ ಭದ್ರತಾ ಪಡೆಗಳತ್ತ ನಕ್ಸಲೀಯರು ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಸಿಬ್ಬಂದಿ ಕೂಡ ಪ್ರತಿದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಭದ್ರತಾ ಪಡೆಯ ಹಲವು ಯೋಧರೂ ಕೂಡ ಗಾಯಗೊಂಡಿದ್ದು ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಎನ್ ಕೌಂಟರ್ ಮುಂದುವರೆದಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸ,ಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com