ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಕೊನೆಯ ಬಜೆಟ್ ಅಧಿವೇಶನ ಇಂದಿನಿಂದ ಆರಂಬವಾಗಲಿದ್ದು, ಜನಪ್ರಿಯ ಘೋಷಣೆಗಳು ಘೋಷಣೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ. ಫೆ.13 ರಂದು ಈ ಅಧಿವೇಶನ ಕೊನೆಗೊಳ್ಳಲಿದೆ. ಚುನಾವಣೆಗೆ ಸಮಾಜದ ವಿವಿಧ ವರ್ಗದ ಜನರನ್ನು ಓಲೈಸುವ ನಿಟ್ಟಿನಿಂದ ಸರ್ಕಾರ ಹಲವಾರು ಜನಪ್ರಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆಗಳಿವೆ.