ಜಮ್ಮು-ಕಾಶ್ಮೀರ: ಪೊಲೀಸ್ ಠಾಣೆ ಮೇಲೆ ಗ್ರೆನೇಡ್ ದಾಳಿ, 4 ನಾಗರೀಕರು, ಓರ್ವ ಯೋಧನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರ ಅನಂತ್ ನಾಗ್ ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಯೊಂದರ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ನಾಲ್ವರು ನಾಗರೀಕರು ಹಾಗೂ ಓರ್ವ ಯೋಧನಿಗೆ ಗಾಯವಾಗಿರುವ ಘಟನೆ ಗುರುವಾರ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಜಮ್ಮು: ಜಮ್ಮು ಮತ್ತು ಕಾಶ್ಮೀರ ಅನಂತ್ ನಾಗ್ ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಯೊಂದರ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ನಾಲ್ವರು ನಾಗರೀಕರು ಹಾಗೂ ಓರ್ವ ಯೋಧನಿಗೆ ಗಾಯವಾಗಿರುವ ಘಟನೆ ಗುರುವಾರ ನಡೆದಿದೆ. 
ಅನಂತ್ ನಾಗ್ ಜಿಲ್ಲೆಯ ಶೈರ್ಬಾಘ್ ಬಳಿಯಿರುವ ಪೊಲೀಸ್ ಠಾಣೆ ಬಳಿ ಮುಸುಕುಧಾರಿಗಳಾಗಿ ಬಂದಿರುವ ಉಗ್ರರು, ಏಕಾಏಕಿ ಗ್ರೆನೇಡ್ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಪರಿಣಾಮ ಸ್ಥಳದಲ್ಲಿದ್ದ ನಾಲ್ವರು ನಾಗರೀಕರು ಹಾಗೂ ಓರ್ವ ಯೋಧನಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ. 
ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಭದ್ರತಾ ಪಡೆಗಳು, ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಗೊಂಡಿರುವ ನಾಗರೀಕರು ಹಾಗೂ ಯೋಧನನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com