ಹೈದರಾಬಾದ್: ವ್ಯಕ್ತಿಯೊಬ್ಬ ಇತ್ತೀಚಿಗಷ್ಟೇ ಮುಕ್ತಾಯವಾದ ತೆಲಂಗಾಣ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ತನ್ನ ಪತ್ನಿಗೆ ಮತ ಹಾಕಲು ಹಣ ವಿತರಿಸಿದ್ದರು. ಆದರೆ ಪತ್ನಿ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದು, ತಾನು ನೀಡಿದ್ದ ಹಣ ವಾಪಸ್ ನೀಡುವಂತೆ ಮತದಾರರಿಗೆ ಒತ್ತಡ ಹಾಕುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ.